HomeLatest NewsALERT : ಮಕ್ಕಳನ್ನು ಮಾರಾಟ ಮಾಡಿದ್ರೆ ಎಚ್ಚರ : 1 ಲಕ್ಷ ರೂ. ದಂಡ ,...

ALERT : ಮಕ್ಕಳನ್ನು ಮಾರಾಟ ಮಾಡಿದ್ರೆ ಎಚ್ಚರ : 1 ಲಕ್ಷ ರೂ. ದಂಡ , 7 ವರ್ಷ ಜೈಲು ಶಿಕ್ಷೆ ಫಿಕ್ಸ್.!

ಮಕ್ಕಳನ್ನು ಮಾರುವವರಿಗೂ ಹಾಗೂ ಕೊಳ್ಳುವವರಿಗೂ ಬಾಲನ್ಯಾಯ ಕಾಯ್ದೆ -2015 ಸೆಕ್ಷನ್ 80 ಮತ್ತು 81ರ ಅನ್ವಯ 5 ವರ್ಷಗಳವರೆಗೂ ಸೆರೆಮನೆ ವಾಸದೊಂದಿಗೆ ರೂ. 1.00 ಲಕ್ಷಗಳವರೆಗೆ ದಂಡ ವಿಧಿಸಬಹುದು. ಈ ಅಪರಾಧದಲ್ಲಿ ಆಸ್ಪತ್ರೆಯವರು ಶಾಮೀಲಾದರೆ ಶಿಕ್ಷೆಯ ಅವಧಿ 3 ವರ್ಷಗಳಿಂದ 7 ವರ್ಷಗಳವರೆಗೆ ವಿಧಿಸಲಾಗುವುದು.

ಸಾರ್ವಜನಿಕ ಸ್ಥಳಗಳಲ್ಲಿ ಅನಾಥ, ಪರಿತ್ಯಕ್ತ ಮತ್ತು ಒಪ್ಪಿಸಲ್ಪಟ್ಟ ಮಕ್ಕಳ ಮಾಹಿತಿಯು ಕಂಡು ಬಂದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಆಲ್ಕೋಳ, ಶಿವಮೊಗ್ಗ ದೂ.ಸಂ.: 08182-295709 ಇಲ್ಲಿಗೆ ಸಂಪರ್ಕಿಸಿ ಮಾಹಿತಿ ನೀಡುವಂತೆ ಶಿವಮೊಗ್ಗ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular