HomeKarnatakaALERT : 'ಝೀಕಾ ವೈರಸ್' ಹೇಗೆ ಹರಡುತ್ತೆ..? ಇದರ ಲಕ್ಷಣ, ಮುನ್ನೆಚ್ಚರಿಕೆ ಕ್ರಮಗಳೇನು ತಿಳಿಯಿರಿ..!

ALERT : ‘ಝೀಕಾ ವೈರಸ್’ ಹೇಗೆ ಹರಡುತ್ತೆ..? ಇದರ ಲಕ್ಷಣ, ಮುನ್ನೆಚ್ಚರಿಕೆ ಕ್ರಮಗಳೇನು ತಿಳಿಯಿರಿ..!

ಬೆಂಗಳೂರು : ಹಗಲು ಹೊತ್ತಿನಲ್ಲಿ ಕಚ್ಚುವ ಈಡಿಸ್ ಇಜಿಪ್ತಿ ಸೊಳ್ಳೆಯಿಂದ ಝೀಕಾ ವೈರಸ್ ಹರಡುತ್ತದೆ. ಮನೆಯ ಸುತ್ತಮುತ್ತ ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಸೊಳ್ಳೆ ಉತ್ತಿಯಾಗದಂತೆ ತಡೆಯಬಹುದು.

ನೀರು ಸಂಗ್ರಹಣಾ ಪರಿಕರಗಳನ್ನು ವಾರಕ್ಕೊಮ್ಮೆ ಉಜ್ಜಿ ಸ್ವಚ್ಛಗೊಳಿಸಬೇಕು. ಸೊಳ್ಳೆ ಪರದೆ, ಸೊಳ್ಳೆ ನಿರೋಧಕಗಳನ್ನು ಉಪಯೋಗಿಸಬೇಕು ಎಂದು ಸರ್ಕಾರ ಎಚ್ಚರಿಕೆ ನೀಡಿದೆ.

ಲಕ್ಷಣಗಳು
ರೋಗ ಲಕ್ಷಣಗಳು
ಅತಿಯಾದ ತಲೆನೋವು
ಕೆಂಪಾದ ಕಣ್ಣು
ಜ್ವರ
ಮೈಯಲ್ಲಿ ಗಂಧೆಗಳು

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಂಜಾಗೃತಾ ಕ್ರಮಗಳೇನು..?
ಝೀಕಾ ವೈರಸ್ ಬಾರದಂತೆ ತಡೆಯಲು ಮುಂಜಾಗ್ರತಾ ಕ್ರಮಗಳು
• ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಪಡಿಸುವುದು
• ಮನೆಯ ಸುತ್ತಮುತ್ತ ಸ್ವಚ್ಛವಾಗಿಡುವುದು
• ನೀರು ಸಂಗ್ರಹಣಾ ಪರಿಕರಗಳನ್ನು ವಾರಕ್ಕೊಮ್ಮೆ ಸ್ವಚ್ಛಗೊಳಿಸುವುದು
• ಮನೆಯ ಪರಿಸರದಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳುವುದು
• ಸೊಳ್ಳೆ ಪರದೆ, ಸೊಳ್ಳೆ ನಿರೋಧಕಗಳನ್ನು ಉಪಯೋಗಿಸುವುದು

ಸೋಂಕು ದೃಢಪಟ್ಟರೆ ಏನು ಮಾಡಬೇಕು?
• ರೋಗಲಕ್ಷಣಗಳಿಗೆ ಅನುಗುಣವಾಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳಿ
• ಮನೆಯಲ್ಲಿಯೇ ಚಿಕಿತ್ಸೆ ಪಡೆಯಬಹುದು. ವಿಶ್ರಾಂತಿ ಅಗತ್ಯ
• ನಿರ್ಜಲೀಕರಣ ತಪ್ಪಿಸಲು ಹೆಚ್ಚು ನೀರಿನ ಅಂಶವುಳ್ಳ ಆಹಾರ
ಪದಾರ್ಥಗಳನ್ನು ಸೇವಿಸಬೇಕು
• ರೋಗ ಲಕ್ಷಣಗಳಿಗೆ ಅನುಗುಣವಾಗಿ ವೈದ್ಯರು ನೀಡುವ ಔಷಧವನ್ನು ಸೇವಿಸಿ
• ಸೋಂಕು ಬೇರೆಯವರಿಗೆ ಹರಡುವುದನ್ನು ತಪ್ಪಿಸಲು ಸೊಳ್ಳೆ ಪರದೆಯನ್ನು ಬಳಸಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular