ALERT : ವಾಹನ ಸವಾರರೇ ಎಚ್ಚರ : ಇನ್ಮುಂದೆ ರಸ್ತೆಯಲ್ಲಿ ಜಗಳ, ದಾಂಧಲೆ ಮಾಡಿದ್ರೆ ಕಾನೂನು ಕ್ರಮ ಫಿಕ್ಸ್..!

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಇತ್ತೀಚೆಗೆ ರೋಡ್ ರೇಜ್ ಪ್ರಕರಣಗಳು ಹೆಚ್ಚಾಗುತ್ತಿದೆ. ರಸ್ತೆಯಲ್ಲಿ ವಾಹನಗಳನ್ನು ಅಡ್ಡಗಟ್ಟಿ ದಾಂಧಲೆ ನಡೆಸುವುದು ಕಂಡು ಬರುತ್ತಿದೆ. ಈ ನಿಟ್ಟಿನಲ್ಲಿ ಪೊಲೀಸರು ಖಡಕ್ ಕ್ರಮಕ್ಕೆ ಮುಂದಾಗಿದ್ದಾರೆ.

ಇಂತಹ ಪ್ರಕರಣದಲ್ಲಿ ಭಾಗಿಯಾದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸರು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನ ರಸ್ತೆಗಳಲ್ಲಿ ಅತಿರೇಕದ ಜಗಳಗಳಿಗಿಲ್ಲ ಅವಕಾಶ! ನಿಮ್ಮ ಆಕ್ರೋಶ ಬದಿಗೊತ್ತಿ, ತಾಳ್ಮೆಯನ್ನು ತಂದುಕೊಳ್ಳಿ. ರಸ್ತೆ ಜಗಳ ಅಪಾಯಕಾರಿಯಷ್ಟೇ ಅಲ್ಲ, ಕ್ರಿಮಿನಲ್ ಅಪರಾಧ ಕೂಡ. ಅದರಲ್ಲಿ ಭಾಗಿಯಾದರೆ ಕಾನೂನು ಕ್ರಮ ನಿಶ್ಚಿತ! ಇಂತಹ ಪರಿಸ್ಥಿತಿಯಲ್ಲಿ ನೆರವು ಪಡೆಯಲು ನಮ್ಮ 112ಗೆ ಕರೆ ಮಾಡಿ ಎಂದು ನಗರ ಸಂಚಾರಿ ಪೊಲೀಸರು ಟ್ವೀಟ್ ಮಾಡಿದ್ದಾರೆ.

https://twitter.com/i/status/1829132195287515546

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read