HomeKarnatakaALERT : ‘HSRP’ ನಂಬರ್ ಪ್ಲೇಟ್ ಅಳವಡಿಸಲು ಇಷ್ಟೇ ಹಣ ಕೊಡಿ, ಮೋಸ ಹೋಗ್ಬೇಡಿ..!

ALERT : ‘HSRP’ ನಂಬರ್ ಪ್ಲೇಟ್ ಅಳವಡಿಸಲು ಇಷ್ಟೇ ಹಣ ಕೊಡಿ, ಮೋಸ ಹೋಗ್ಬೇಡಿ..!

ಬೆಂಗಳೂರು : ಏಪ್ರಿಲ್ 2019ಕ್ಕಿಂತ ಮೊದಲು ನೋಂದಣಿ ಮಾಡಿಸಿದ್ದ ಹಳೆಯ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ (HSRP) ಅಳವಡಿಕೆ ಮಾಡುವುದುಕಡ್ಡಾಯವಾಗಿದೆ.

ಕರ್ನಾಟಕ ರಾಜ್ಯದಲ್ಲಿ 1ನೇ ಏಪ್ರಿಲ್ 2019ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಹಳೆಯ ಎಲ್ಲಾ (ಹಳೆಯ / ಅಸ್ತಿತ್ವದಲ್ಲಿರುವ ವಾಹನಗಳು) (ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನಗಳು, ಪ್ರಯಾಣಿಕ ಕಾರುಗಳು, ಮಧ್ಯಮ ಮತ್ತು ಭಾರಿ ವಾಣಿಜ್ಯ ವಾಹನಗಳು, ಟ್ರೈಲರ್, ಟ್ರ್ಯಾಕ್ಟರ್ ಇತ್ಯಾದಿ) ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು (ಹೆಚ್ಎಸ್ಆರ್ಪಿ) ಅಳವಡಿಸುವುದು ಕಡ್ಡಾಯವಾಗಿದೆ.

HSRP ಅಳವಡಿಕೆ ಮಾಡುವುದಕ್ಕೆ ಎಷ್ಟು ಹಣ ಕೊಡಬೇಕು..? ಬೈಕ್ ಗೆ ಎಷ್ಟಿದೆ, ಕಾರು, ಆಟೋ., ಲಾರಿಗೆ ಎಷ್ಟಿದೆ. ಇಲ್ಲಿದೆ ಮಾಹಿತಿ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

*ಬೈಕ್ – 450
*ಆಟೋ ಸೇರಿದಂತೆ ತ್ರಿಚಕ್ರ ವಾಹನಗಳಿಗೆ – 450 ರೂಪಾಯಿಯಿಂದ 550 ರೂ.
*ಕಾರು ಅಥವಾ 4 ಚಕ್ರದ ವಾಹನಗಳಿಗೆ -ರೂಪಾಯಿ 650 ರಿಂದ 780 ರೂ.ವರೆಗೆ
*ಭಾರೀ ವಾಹನಗಳಾದ ಟ್ರಕ್ ಹಾಗೂ ಬಸ್ಗಳು ಸೇರಿದಂತೆ 10 ಚಕ್ರದ ವಾಹನಗಳಿಗೆ   ಸರ್ಕಾರ   650 ರೂಪಾಯಿಯಿಂದ 800 ರೂಪಾಯಿ ಹಣ ನಿಗದಿ ಮಾಡಿದೆ.

ಏಪ್ರಿಲ್ 2019ಕ್ಕಿಂತ ಮೊದಲು ನೋಂದಣಿ ಮಾಡಿಸಿದ್ದ ಹಳೆಯ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ (HSRP) ಅವಳಡಿಕೆ ಕಡ್ಡಾಯ ಮಾಡಿ ಸಾರಿಗೆ ಇಲಾಖೆ ಆದೇಶ ಹೊರಡಿಸಿತ್ತು. ಫೆಬ್ರವರಿ 17ರೊಳಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಸುವಂತೆ ಡೆಡ್ ಲೈನ್ ನೀಡಿತ್ತು.ಈ ವಿಚಾರ ವಿಧಾನಪರಿಷತ್ ನಲ್ಲಿ ಪ್ರಸ್ತಾಪವಾಗಿದ್ದು, ಈ ಬಗ್ಗೆ ಪರಿಷತ್ ಸದಸ್ಯ ಮಾದೇಗೌಡ ಅವಧಿ ವಿಸ್ತರಿಸಲು ಮನವಿ ಮಾಡಿದ್ದಾರೆ. ಇದಕ್ಕೆ ಉತ್ತರಿಸಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಇನ್ನೂ 3 ತಿಂಗಳು ಅವಧಿ ವಿಸ್ತರಣೆ ಮಾಡುವುದಾಗಿ ತಿಳಿಸಿದರು.

HSRP ನಂಬರ್ ಪ್ಲೇಟ್ ಪಡೆಯೋದು ಹೇಗೆ..?

* https://transport.karnataka.gov.in ಅಥವಾ www.siam.in ಗೆ ಭೇಟಿ ನೀಡಿ ಮತ್ತು Book HSRP ನ್ನು ಕ್ಲಿಕ್ ಮಾಡಿ.
*ನಿಮ್ಮ ವಾಹನ ತಯಾರಕರನ್ನು ಆಯ್ಕೆಮಾಡಿ.
*ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ.

*HSRP ಅಳವಡಿಕೆಗಾಗಿ ನಿಮ್ಮ ಅನುಕೂಲಕ್ಕೆ ತಕ್ಕಂತೆ ಡೀಲರ್ ಸ್ಥಳವನ್ನು ಆಯ್ಕೆಮಾಡಿ.
*HSRP ಶುಲ್ಕವನ್ನು ಆನ್ಲೈನ್ನಲ್ಲಿ ಪಾವತಿಸಿ. ಶುಲ್ಕ ಪಾವತಿಯನ್ನು ನಗದು ರೂಪದಲ್ಲಿ ಮಾಡುವಂತಿಲ್ಲ.
*ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ಒ.ಟಿ.ಪಿ. ರವಾನಿಸಲಾಗುವುದು.
*ನಿಮ್ಮ ಅನುಕೂಲಕ್ಕೆ ತಕ್ಕಂತೆ HSRP ಅಳವಡಿಕೆಯ ದಿನಾಂಕ ಮತ್ತು ಸಮಯವನ್ನು ಆಯ್ಕೆಮಾಡಿ.
*ವಾಹನ ಮಾಲೀಕರ ಕಚೇರಿ ಆವರಣ / ಮನೆಯ ಸ್ಥಳದಲ್ಲಿ HSRP ಅಳವಡಿಕೆಗಾಗಿ ಆಯ್ಕೆ ಮಾಡಬಹುದು.
*ನಿಮ್ಮ ವಾಹನದ ಯಾವುದೇ ತಯಾರಕ/ಡೀಲರ್ ಸಂಸ್ಥೆಗೆ ಭೇಟಿ ನೀಡಿ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular