ALERT : ಅಪ್ರಾಪ್ತೆಗೆ ‘ಕಿಸ್’ ಕೊಟ್ಟವನಿಗೆ ಮೂರು ವರ್ಷ ಜೈಲು ಶಿಕ್ಷೆ ; ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು : ಅಪ್ರಾಪ್ತೆಗೆ ಮುತ್ತು ಕೊಟ್ಟವನಿಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.

ಹೌದು, ನಿನ್ನನ್ನು ಪ್ರೀತಿಸುತ್ತೇನೆ ಎಂದು ಹೇಳಿ ಅಪ್ರಾಪ್ತೆಯನ್ನು ಮುತ್ತಿಟ್ಟ ಕಾಫಿ ತೋಟದ ಕೂಲಿ ಕಾರ್ಮಿಕನಿಗೆ ಲೈಂಗಿಕ ದೌರ್ಜನ್ಯ ಅಪರಾಧಡಿ ಮೂರು ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಲಾಗಿದೆ.

ಮೂಡಿಗೆರೆ ತಾಲೂಕಿನ ಕೆಳಗೂರು ಗ್ರಾಮದ ಪ್ರತಾಪ್ (28) ಎಂಬಾತನಿಗೆ ಕೋರ್ಟ್ ಈ ಶಿಕ್ಷೆ ನೀಡಿದೆ.
2014 ರಲ್ಲಿ ಅ.26 ರಂದು ಈತ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಅಪ್ರಾಪ್ತೆಯನ್ನು ಹಿಡಿದುಕೊಂಡು ಪಕ್ಕದ ಹಳೇ ಶೌಚಾಲಯದ ಕಟ್ಟಡವೊಂದಕ್ಕೆ ಎಳೆದುಕೊಂಡು ಹೋಗಿ ಬಾಲಕಿಯ ಕೆನ್ನೆಗೆ ಮುತ್ತಿಟ್ಟು ಎದೆಯ ಭಾಗವನ್ನು ಸ್ಪರ್ಶಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದನು. ನಂತರ ಬಾಲಕಿ ಈತನಿಂದ ತಪ್ಪಿಸಿಕೊಂಡು ಹೋಗಿದ್ದಳು. ನಂತತರ ಪೋಷಕರ ಜೊತೆ ಚಿಕ್ಕಮಗಳೂರಿನ ಬಾಲೂರು ಠಾಣೆಗೆ ದೂರು ನೀಡಿದ್ದರು. ತನಿಖೆ ನಡೆಸಿದ್ದ ಪೊಲೀಸರು ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಿಸಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಆದರೆ ಸಾಕ್ಷ್ಯಗಳ ಕೊರತೆ ಹಿನ್ನೆಲೆ ಚಿಕ್ಕಮಗಳೂರು ಪೋಕ್ಸೋ ವಿಶೇಷ ಕೋರ್ಟ್ ಆರೋಪಿಯನ್ನು ಖುಲಾಸೆಗೊಳಿಸಿ 2017 ರ ಜ.30 ರಂದು ಆದೇಶ ಹೊರಡಿಸಿತ್ತು. ನಂತರ ಪೊಲೀಸರು ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.  ವಿಚಾರಣೆ ನಡೆಸಿದ ಕೋರ್ಟ್ 3 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read