ಬೆಂಗಳೂರು : ವನ್ಯಜೀವಿಗಳ ಚರ್ಮ, ಉಗುರು ಧರಿಸುವುದು ಕಾನೂನು ಉಲ್ಲಂಘನೆಯಾಗಿದೆ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಎಚ್ಚರಿಕೆ ನೀಡಿದರು.
ಹುಲಿ ಉಗುರಿನ ಲಾಕೆಟ್ ಸೇರಿದಂತೆ ವನ್ಯಜೀವಿ ಉತ್ಪನ್ನಗಳ ಅಕ್ರಮ ದಾಸ್ತಾನಿನ ವಿಚಾರಗಳ ಮತ್ತು ರಾಜ್ಯದಲ್ಲಿ ನಡೆಯುತ್ತಿರುವ ಪ್ರಸ್ತುತ ವಿದ್ಯಮಾನಗಳ ಕುರಿತು ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು.
ಸಭೆ ಬಳಿಕ ವಿಕಾಸಸೌಧದಲ್ಲಿ ಮಾತನಾಡಿದ ಸಚಿವ ಈಶ್ವರ್ ಖಂಡ್ರೆ ವನ್ಯಜೀವಿಗಳ ಚರ್ಮ, ಉಗುರು ಧರಿಸುವುದು ಕಾನೂನು ಉಲ್ಲಂಘನೆಯಾಗಿದೆ. 1972ರ ವನ್ಯಜೀವಿಗಳ ಸಂರಕ್ಷಣಾ ಕಾಯ್ದೆಯಡಿ ಉಲ್ಲಂಘನೆ ಆಗುತ್ತದೆ. ಹುಲಿ ಉಗುರು ಧರಿಸಿದವರ ವಿರುದ್ಧ ಈವರೆಗೆ 8 ದೂರು ಬಂದಿದೆ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.
ವನ್ಯಜೀವಿಗಳ ಚರ್ಮ ಹುಲಿಯ ಉಗುರು ಧರಿಸುವುದು ಕಾನೂನು ಉಲ್ಲಂಘನೆಯಾಗಿದ್ದು, 1972ರ ವನ್ಯಜೀವಿಗಳ ಸಂರಕ್ಷಣಾ ಕಾಯ್ದೆ ಉಲ್ಲಂಘನೆ ಆಗುತ್ತದೆ . ವನ್ಯಜೀವಿಗಳ ಚರ್ಮ ಉಗುರು ಬಳಕೆ ಮಾಡುವುದು ನಿಷೇಧವಿದೆ. ಈ ಬಗ್ಗೆ ಕಾನೂನಿನ ಜ್ಞಾನದ ಅರಿವು ಇರುವುದಿಲ್ಲ ಹೀಗಾಗಿ ಇಂತಹ ಘಟನೆಗಳು ನಡೆಯುತ್ತಿವೆ ಎಂದರು.
https://twitter.com/eshwar_khandre/status/1717436043266555914