HomeEntertainment31ನೇ ವಸಂತಕ್ಕೆ ಕಾಲಿಟ್ಟ ನಟಿ ಅಲಿಯಾ ಭಟ್

31ನೇ ವಸಂತಕ್ಕೆ ಕಾಲಿಟ್ಟ ನಟಿ ಅಲಿಯಾ ಭಟ್

ಬಾಲಿವುಡ್ ನ ಖ್ಯಾತ ನಟಿ ಅಲಿಯಾ ಭಟ್ ಇಂದು ತಮ್ಮ 31ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. 1999 ರಲ್ಲಿ ತೆರೆಕಂಡ ಅಕ್ಷಯ್ ಕುಮಾರ್ ನಟನೆಯ ‘ಸಂಘರ್ಷ’ ಚಿತ್ರದಲ್ಲಿ ಬಾಲ ಕಲಾವಿದೆಯಾಗಿ ಅಭಿನಯಿಸುವ ಮೂಲಕ ತಮ್ಮ ಸಿನಿ ಜರ್ನಿ ಆರಂಭಿಸಿದರು. 2012ರಲ್ಲಿ ‘ಸ್ಟೂಡೆಂಟ್ ಆಫ್ ದಿ ಇಯರ್’ ಸಿನಿಮಾದಲ್ಲಿ ಮೊದಲ ಬಾರಿ ನಾಯಕ ನಟಿಯಾಗಿ ಕಾಣಿಸಿಕೊಂಡರು. ಅಂದಿನಿಂದ ಇಂದಿನವರೆಗೂ ಬಾಲಿವುಡ್ ನ ಬೇಡಿಕೆಯ ನಟಿಯಾಗಿದ್ದಾರೆ.

ನಟಿ ಅಲಿಯಾ ಭಟ್ ಕಳೆದ ವರ್ಷ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಚಿತ್ರದಲ್ಲಿ ರಣವೀರ್ ಸಿಂಗ್ ಜೊತೆ ತೆರೆ ಹಂಚಿಕೊಂಡಿದ್ದರು. ಇತ್ತೀಚಿಗೆ ‘ಜಿಗ್ರಾ’ ಶೂಟಿಂಗ್ನಲ್ಲಿ ಬಿಜಿಯಾಗಿದ್ದಾರೆ. ಇಂದು ಸಾಮಾಜಿಕ ಜಾಲತಾಣದಲ್ಲಿ ಅವರ ಅಭಿಮಾನಿಗಳು ಮತ್ತು ಸಿನಿ ತಾರೆಯರು  ಹುಟ್ಟು ಹಬ್ಬದ ಶುಭಾಶಯ ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular