BREAKING : ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ಜೂ. 21 ರಂದು ‘ಅಂತರರಾಷ್ಟ್ರೀಯ ಯೋಗ ದಿನ’ ಆಚರಣೆ ಕಡ್ಡಾಯ : ‘ಶಿಕ್ಷಣ ಇಲಾಖೆ’ ಮಹತ್ವದ ಆದೇಶ.!

ಬೆಂಗಳೂರು : ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ಜೂನ್ 21 ರಂದು ‘ಅಂತರರಾಷ್ಟ್ರೀಯ ಯೋಗ ದಿನ’ ಆಚರಣೆ ಕಡ್ಡಾಯಗೊಳಿಸಿ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ವಿಶ್ವಸಂಸ್ಥೆಯು ಜೂನ್ 21 ನ್ನು ‘ಅಂತರರಾಷ್ಟ್ರೀಯ ಯೋಗ ದಿನ’ ವನ್ನಾಗಿ ಘೋಷಿಸಿದೆ. ಯೋಗ ಭಾರತದ ಪ್ರಾಚೀನ ಸಂಪ್ರದಾಯದ ಒಂದು ಅತ್ಯಮೂಲ್ಯ ಕೊಡುಗೆಯಾಗಿದೆ. ಇದು ಮನಸ್ಸು ಮತ್ತು ದೇಹದ ಐಕ್ಯತೆಯನ್ನು ಸಾಕಾರಗೊಳಿಸಿದೆ. ಯೋಗವು ನಮ್ಮ ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಲೇಬೇಕಾದ ಉತ್ತಮ ಜೀವನ ನಿರ್ವಹಣೆಯ ಒಂದು ವಿಜ್ಞಾನವಾಗಿದೆ. ಇದು ಒಬ್ಬ ಮನುಷ್ಯನ ಶಾರೀರಿಕರವಾದ, ಚೇತನಾತ್ಮಕವಾದ ಭೌದ್ಧಿಕವಾದ ಭಾವನಾತ್ಮಕವಾದ, ಮಾನಸಿಕ ಮತ್ತು ಆಧ್ಯಾತ್ಮಿಕವಾದ ಎಲ್ಲಾ ಸ್ತರಗಳಲ್ಲಿಯೂ ಕೆಲಸ ಮಾಡುತ್ತದೆ. ಇದು ಇಂದಿನ ಮತ್ತು ಭವಿಷ್ಯದ ಅಗತ್ಯವೂ ಆಗಿದೆ. ಯೋಗಾಭ್ಯಾಸ ಮಾಡುವುದರಿಂದ ಭಾವನಾತ್ಮಕ, ಮಾನಸಿಕ ಮತ್ತು ಶಾರೀರಿಕ ಹಂತಗಳ ಆಂತರಿಕ ಸಂಬಂಧಗಳ ಬಗ್ಗೆ ಮತ್ತು ಇವುಗಳಲ್ಲಿ ಯಾವುದಾದರೊಂದು ಅವ್ಯವಸ್ಥಿತವಾದರೆ, ಇನ್ನಿತರ ಹಂತಗಳ ಮೇಲೆ ಹೇಗೆ ಪ್ರಭಾವ ಬೀರುತ್ತದೆ ಎಂಬ ತಿಳುವಳಿಕೆಯು ಮೂಡುತ್ತದೆ.

ಭಾರತ ಸರ್ಕಾರದ ಆಯುಷ್ ಸಚಿವಾಲಯವು ಜೂನ್ 21, 2025 ರಂದು ಬೆಳಿಗ್ಗೆ 7:00 ರಿಂದ 7:45 ರವರೆಗೆ ‘ಅಂತರರಾಷ್ಟ್ರೀಯ ಯೋಗ ದಿವಸ’-2025 ಥೀಮ್ “Yoga for One Earth, One Health” ರಡಿಯಲ್ಲಿ ಪ್ರಮುಖ ಕಾರ್ಯಕ್ರಮವಾದ ‘ಯೋಗ ಸಂಗಮ’ವನ್ನು ಆಯೋಜಿಸುತ್ತಿದ್ದು, ಈ ಸಾಮೂಹಿಕ ಯೋಗ ಪ್ರದರ್ಶನವು ಸಾಮಾನ್ಯ ಯೋಗ ಪ್ರೋಟೋಕಾಲ್ (CYP) ಅನ್ನು ಆಧರಿಸಿದೆ ಮತ್ತು ಭಾರತದ 1,00,000+ ಸ್ಥಳಗಳಲ್ಲಿ ಏಕಕಾಲದಲ್ಲಿ ನಡೆಯಲಿದೆ. ಸದರಿ ಯೋಗ ಸಂಗಮ ಕಾರ್ಯಕ್ರಮಕ್ಕೆ ಯೋಗ https://yoga.ayush.gov.in/yoga-sangam ) ಸೂಚಿಸಿದೆ.

ಇಲಾಖಾ ವ್ಯಾಪ್ತಿಯ ಎಲ್ಲಾ ಸರ್ಕಾರಿ, ಖಾಸಗಿ ಅನುದಾನಿತ, ಅನುದಾನ ರಹಿತ ಪ್ರಥಮ ದರ್ಜೆ ಕಾಲೇಜುಗಳು ಹಾಗೂ ಪಾಲಿಟೆಕ್ನಿಕ್/ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಜೂನ್ 21, 2025 ರಂದು ‘ಅಂತರರಾಷ್ಟ್ರೀಯ ಯೋಗ ದಿವಸ’ವನ್ನು ಆಚರಿಸಿ. ಈ ಮೂಲಕ ವಿದ್ಯಾರ್ಥಿಗಳಲ್ಲಿ ‘ಯೋಗ’ ಮತ್ತು ಇದರ ಮಹತ್ವ ಹಾಗೂ ಪ್ರಯೋಜನಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read