BIG NEWS: ಶತಮಾನದ ಸಂತ ಸಿದ್ದೇಶ್ವರ ಶ್ರೀಗಳಿಗೆ ಸಕಲ ಸರ್ಕಾರಿ ಗೌರವ; ಪುಷ್ಪ ನಮನ ಸಲ್ಲಿಸಿದ ಸಿಎಂ, ಸಚಿವರು, ಶಾಸಕರು

ವಿಜಯಪುರ: ರಾಜ್ಯ ಕಂಡ ಅಪರೂಪದ ಸಂತ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳಿಗೆ ವಿಜಯಪುರ ಸೈನಿಕ ಶಾಲೆಯ ಆವರಣದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ ಸಲ್ಲಿಸಲಾಯಿತು.

ನಿನ್ನೆ ಅಸ್ತಂಗತರಾಗಿರುವ ಸಿದ್ದೇಶ್ವರ ಶ್ರೀಗಳ ಪಾರ್ಥಿವ ಶರೀರವನ್ನು ಭಕ್ತರ ಹಾಗೂ ಸಾರ್ವಜನಿಕರಿಗಾಗಿ ಅಂತಿಮ ದರ್ಶನಕ್ಕಾಗಿ ವಿಜಯಪುರ ಸೈನಿಕ ಶಾಲಾ ಮೈದಾನದಲ್ಲಿ ಇಡಲಾಗಿದ್ದು, ಅಗಲಿದ ಸಂತ ಸಿದ್ದೇಶ್ವರ ಶ್ರೀಗಳಿಗೆ ಸರ್ಕಾರಿ ಗೌರವ ಸಲ್ಲಿಸಲಾಯಿತು. ಪೊಲೀಸ್ ಬ್ಯಾಂಡ್ ನಿಂದ ರಾಷ್ಟ್ರಗೀತೆ ಮೂಲಕ ಅಂತಿಮ ನಮನ ಸಲ್ಲಿಸಲಾಯಿತು.

ಈ ವೇಳೆ ಶ್ರೀಗಳ ಪಾರ್ಥಿವ ಶರೀರಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಪುಷ್ಪನಮನ ಸಲ್ಲಿಸಿದರು. ಇದೇ ವೇಳೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸಭಾಪತಿ ಬಸವರಾಜ್ ಹೊರಟ್ಟಿ ಸಚಿವರಾದ ಗೋವಿಂದ ಕಾರಜೋಳ, ಮುರಿಗೇಶ್ ನಿರಾಣಿ, ಶ್ರೀರಾಮುಲು, ಸಿ.ಸಿ.ಪಾಟೀಲ್, ಶಶಿಕಲಾ ಜೊಲ್ಲೆ, ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ಪ್ರಹ್ಲಾದ್ ಜೋಶಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಸುತ್ತೂರು ಶ್ರೀಗಳು, ನಿರ್ಮಲಾನಂದ ಸ್ವಾಮೀಜಿ, ಸಿರಿಗೆರೆಶ್ರೀ ಸೇರಿದಂತೆ ಮೊದಲಾದವರು ಅಂತಿಮ ಗೌರವ ಸಲ್ಲಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read