ರಾಜಸ್ಥಾನದಲ್ಲಿ ಅಖಿಲ ಭಾರತ ನೀರಾವರಿ ಸಚಿವರುಗಳ ಸಮ್ಮೇಳನ: ಮೇಕೆದಾಟು, ಮಹದಾಯಿ, ನವಲಿ ಸೇರಿದಂತೆ ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಚರ್ಚೆ: ಡಿಸಿಎಂ ಮಾಹಿತಿ

ಬೆಂಗಳೂರು: ರಾಜಸ್ಥಾನದ ಉದಯಪುರದಲ್ಲಿ ಅಖಿಲ ಭಾರತ ನೀರಾವರಿ ಸಚಿವರುಗಳ ಸಮ್ಮೇಳ ನಡೆಯುತ್ತಿದ್ದು, ಈ ಸಭೆಯಲ್ಲಿ ಮೇಕೆದಾಟು, ಮಹದಾಯಿ, ನವಲಿ ಹಾಗೂ ಅಣೆಕಟ್ಟು ದುರಸ್ತಿ ಸೇರಿದಂತೆ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳ ಬಗ್ಗೆ ಚರ್ಚೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ರಾಜಸ್ಥಾನಕ್ಕೆ ಪ್ರಯಾಣ ಬೆಳೆಸುವ ಮುನ್ನ ಹೆಚ್ ಎ ಎಲ್ ನಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ರಾಜಸ್ಥಾನದಲ್ಲಿ ಎಲ್ಲಾ ರಾಜ್ಯಗಳ ನೀರಾವರಿ ಸಚಿವರ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ನಮ್ಮ ರಾಜ್ಯಕ್ಕೆ ನೀರಾವರಿ ವಿಚಾರದಲ್ಲಿ ಆಗಿರುವ ಅನ್ಯಾಯದ ಬಗ್ಗೆ ಪ್ರಸ್ತಾಪ ಮಾಡುತ್ತೇನೆ ಎಂದು ತಿಳಿಸಿದರು.

ಮೇಕೆದಾಟು, ಮಹದಾಯಿ ಯೋಜನೆ ಅನುಮತಿ, ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಆಗಿರುವ ಅನ್ಯಾಯಗಳ ಬಗ್ಗೆ ಚರ್ಚೆ ಮಾಡುತ್ತೇನೆ. ಇದರ ಜತೆಗೆ ಈ ವರ್ಷ ನಾವು ಅನೇಕ ಇತರೆ ನೀರಾವರಿ ಯೋಜನೆಗಳನ್ನು ತಯಾರು ಮಾಡಿ ಕೇಂದ್ರಕ್ಕೆ ಕಳುಹಿಸಿದ್ದೇವೆ ಎಂದು ಹೇಳಿದರು.

ತುಂಗ ಭದ್ರಾ ಅಣೆಕಟ್ಟು ಕ್ರೆಸ್ಟ್ ಗೇಟ್ ದುರಸ್ತಿ ಬಳಿಕ ರಾಜ್ಯದ ಎಲ್ಲಾ ಅಣೆಕಟ್ಟುಗಳ ಸುರಕ್ಷತೆಗಾಗಿ ಅವುಗಳ ರಿಪೇರಿಗೆ ಯೋಜನೆಯನ್ನು ಸಿದ್ಧಪಡಿಸಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಇನ್ನು ಈ ಜಲಾಶಯಕ್ಕೆ ನವಲಿಯಲ್ಲಿ ಸಮಾನಾಂತರ ಜಲಾಶಯ ನಿರ್ಮಾಣ ಮಾಡುವ ವಿಚಾರವಾಗಿ ತೆಲಂಗಾಣ ಹಾಗೂ ಆಂಧ್ರ ಪ್ರದೇಶ ರಾಜ್ಯಗಳ ಸಚಿವರ ಜೊತೆ ಚರ್ಚೆ ಮಾಡಲಾಗುವುದು. ಈ ವಿಚಾರವಾಗಿ ಪ್ರತ್ಯೇಕ ಸಭೆ ಮಾಡಲು ಈಗಾಗಲೇ ಎರಡೂ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೇನೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read