HomeLatest Newsಆನ್ಲೈನ್ ವಂಚನೆ ತಡೆಗೆ ಕೇಂದ್ರ ಸರ್ಕಾರ ಮಹತ್ವದ ಕ್ರಮ: ಇನ್ನು 6 ತಿಂಗಳಲ್ಲಿ ಸುರಕ್ಷಿತ 'ಬ್ಯಾಂಕ್....

ಆನ್ಲೈನ್ ವಂಚನೆ ತಡೆಗೆ ಕೇಂದ್ರ ಸರ್ಕಾರ ಮಹತ್ವದ ಕ್ರಮ: ಇನ್ನು 6 ತಿಂಗಳಲ್ಲಿ ಸುರಕ್ಷಿತ ‘ಬ್ಯಾಂಕ್. ಇನ್’ ಡೊಮೈನ್

ನವದೆಹಲಿ: ಹಣಕಾಸು ಸಂಸ್ಥೆಗಳ ಹೆಸರಲ್ಲಿ ಹೆಚ್ಚುತ್ತಿರುವ ಆನ್ ಲೈನ್ ವಂಚನೆ ತಡೆಯುವ ಉದ್ದೇಶದಿಂದ ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.

ಬ್ಯಾಂಕುಗಳಿಗೆ ಪ್ರತ್ಯೇಕ ಮತ್ತು ಸುರಕ್ಷಿತವಾದ ಬ್ಯಾಂಕಿಂಗ್ ಡೊಮೈನ್ ರೂಪಿಸಿದ್ದು, ಮುಂದಿನ ಆರು ತಿಂಗಳಲ್ಲಿ ಎಲ್ಲಾ ಬ್ಯಾಂಕುಗಳು ಈ ಡೊಮೈನ್ ಗೆ ವರ್ಗಾವಣೆಯಾಗಲಿವೆ. ಭಾರತೀಯ ರಾಷ್ಟ್ರೀಯ ಇಂಟರ್ನೆಟ್ ವಿನಿಮಯ ಕೇಂದ್ರದ(NIXI) ಸಿಇಒ ದೇವೇಶ್ ತ್ಯಾಗಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಎಂಎಸ್ಎಂಎ ಮತ್ತು ಪ್ರವಾಸೋದ್ಯಮ ಸಚಿವಾಲಯಗಳೊಂದಿಗೂ ಮಾತುಕತೆ ನಡೆಸುತ್ತಿದ್ದು, ಸಂಬಂಧಿಸಿದ ಪ್ರತ್ಯೇಕ ಡೊಮೈನ್ ಗಳನ್ನು ರೂಪಿಸುವ ಯೋಜನೆ ಆರಂಭಿಸಲಾಗಿದೆ. ಹೆಚ್ಚುತ್ತಿರುವ ಸೈಬರ್ ವಂಚನೆ ತಡೆಯಲು ಪರಿಹಾರ ರೂಪಿಸುವಂತೆ ಆರ್‌ಬಿಐ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವನ್ನು ಸಂಪರ್ಕಿಸಿದ್ದು, ಈ ನಿಟ್ಟಿನಲ್ಲಿ ಎಲ್ಲಾ ಬ್ಯಾಂಕುಗಳಿಗೆ ಬ್ಯಾಂಕ್.ಇನ್ ಮತ್ತು ಜಾರಿಗೊಳಿಸಲು ಸರ್ಕಾರ ಮುಂದಾಗಿದೆ. ಡೊಮೈನ್ ಮಟ್ಟದ ಭದ್ರತೆ ಬಲಪಡಿಸಲು ತನ್ನ ರಿಜಿಸ್ಟ್ರಾರ್ ಮಾನ್ಯತೆ ಒಪ್ಪಂದವನ್ನು ತಿದ್ದುಪಡಿ ಮಾಡಿದೆ. ಆದರೂ, ಅದರ ಅನುಷ್ಠಾನ ಇನ್ನೂ ನಡೆಯುತ್ತಿದೆ. ನಾವು ಹೆಚ್ಚು ಸುರಕ್ಷಿತವಾಗಲು ಬಯಸಿದರೆ ನಮ್ಮದೇ ಆದ ನೀತಿ ರಚಿಸಿ ಜಾರಿಗೊಳಿಸಬೇಕಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular