HomeLatest Newsಸರ್ಕಾರಿ ನೌಕರರಿಗೆ ಸಬ್ಸಿಡಿ ದರದಲ್ಲಿ ಎಲ್ಲ ವಸ್ತು: ಮಿಲಿಟರಿ ಕ್ಯಾಂಟೀನ್ ಮಾದರಿ ಎಂಎಸ್ಐಎಲ್ ಸ್ಟೋರ್

ಸರ್ಕಾರಿ ನೌಕರರಿಗೆ ಸಬ್ಸಿಡಿ ದರದಲ್ಲಿ ಎಲ್ಲ ವಸ್ತು: ಮಿಲಿಟರಿ ಕ್ಯಾಂಟೀನ್ ಮಾದರಿ ಎಂಎಸ್ಐಎಲ್ ಸ್ಟೋರ್

ಬೆಂಗಳೂರು: ಸರ್ಕಾರಿ ನೌಕರರಿಗೆ ಎಲ್ಲಾ ವಸ್ತುಗಳನ್ನು ಸಬ್ಸಿಡಿ ದರದಲ್ಲಿ ಸಿಗುವಂತೆ ಮಾಡಲು ಮಿಲಿಟರಿ ಕ್ಯಾಂಟೀನ್ ಮಾದರಿಯಲ್ಲಿ ಎಂಎಸ್ಐಎಲ್ ಸ್ಟೋರ್ ತೆರೆಯುವ ಚಿಂತನೆ ಇದೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.

ಎಂಎಸ್ಐಎಲ್ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಎಂಎಸ್ಐಎಲ್ ಚಿಟ್ಸ್ ಹೊಸ ತಂತ್ರಾಂಶ ಮತ್ತು ಮೊಬೈಲ್ ಆ್ಯಪ್ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಎಂಎಸ್ಐಎಲ್ ಸ್ಟೋರ್ ತೆರೆಯುವ ಬಗ್ಗೆ ಸಾಧಕ ಬಾಧಕಗಳ ಅಧ್ಯಯನ ನಡೆಸಲಾಗುತ್ತಿದೆ. ಇದರಿಂದ 20 ಲಕ್ಷ ಕುಟುಂಬಗಳಿಗೆ ಅನುಕೂಲವಾಗುತ್ತದೆ ಎಂದು ಹೇಳಿದ್ದಾರೆ.

ಎಂಎಸ್ಐಎಲ್ 27 ಶಾಖೆ ಹೊಂದಿದ್ದು ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಜಿಲ್ಲೆ ಮತ್ತು ತಾಲೂಕು ಕೇಂದ್ರಗಳಿಗೂ ವಿಸ್ತರಿಸಲಾಗುವುದು. ಚಿಟ್ ಫಂಡ್ ಕೆಲಸಗಳಿಗೆ ಏಜೆಂಟರನ್ನು ನೇಮಿಸಲಿದ್ದು ಇದರಿಂದ 10 ಸಾವಿರಕ್ಕೂ ಅಧಿಕ ಮಂದಿಗೆ ಉದ್ಯೋಗ ಸಿಗಲಿದೆ. ಮನೆಮನೆಗೂ ಎಂಎಸ್ಐಎಲ್ ತಲುಪಿಸುವ ಯೋಜನೆ ಇದೆ ಎಂದು ಅವರು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular