ಬೆಂಗಳೂರು: ‘ನಮ್ಮ ಶಾಲೆ, ನಮ್ಮ ಜವಾಬ್ದಾರಿ’ ಅಡಿಯಲ್ಲಿ ಹೊಸ ಶೈಕ್ಷಣಿಕ ವರ್ಷದ ಸ್ವಾಗತಕ್ಕೆ ಸಂಭ್ರಮದ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಹೊಸ ಶೈಕ್ಷಣಿಕ ವರ್ಷವನ್ನು ಹಬ್ಬದಂತೆ ಸ್ವಾಗತಿಸಲು ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಸಚಿವರು, ಜಿಲ್ಲಾಧಿಕಾರಿಗಳು ಸೇರಿದಂತೆ ಅನೇಕ ಗಣ್ಯರು ಮಕ್ಕಳನ್ನು ಆತ್ಮೀಯವಾಗಿ ಶಾಲೆಗೆ ಸ್ವಾಗತಿಸುವ ಹಾಗೂ ಶಿಕ್ಷಣ ಇಲಾಖೆಯು ಈ ವರ್ಷ ಕೈಗೊಂಡಿರುವ ಮಹತ್ವಪೂರ್ಣ ಸವಲತ್ತುಗಳು ಮತ್ತು ಸುಧಾರಣೆಗಳನ್ನು ಪರಿಚಯಿಸುವ ಬಗ್ಗೆ ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಸಲಾಗಿದೆ.
ಕೆಪಿಎಸ್ ಶಾಲೆಗಳ ಪ್ರಗತಿ, ಶಾಲೆಗಳಿಗೆ ಅಗತ್ಯವಾದ ಪೀಠೋಪಕರಣಗಳ ಒದಗಿಸುವುದು, ಪರೀಕ್ಷಾ ವ್ಯವಸ್ಥೆಯ ಸುಧಾರಣೆ, ಉಚಿತ ಪಠ್ಯಪುಸ್ತಕ ಹಾಗೂ ಸಮವಸ್ತ್ರ ವಿತರಣೆಯ ಕುರಿತಂತೆ, ಜೊತೆಗೆ ಶಿಕ್ಷಣ ಇಲಾಖೆಯ ಇತರ ಪ್ರಮುಖ ವಿಷಯಗಳ ಬಗ್ಗೆ ಉನ್ನತಾಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಲಾಯಿತು.
ಈ ಸಭೆಯಲ್ಲಿ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್, ಶಾಲಾ ಶಿಕ್ಷಣ ಇಲಾಖೆಯ ಆಯುಕ್ತ ಡಾ. ತ್ರಿಲೋಕ್ ಚಂದ್ರ ಕೆ.ವಿ., ಪದವಿ ಪೂರ್ವ ಶಿಕ್ಷಣ ನಿರ್ದೇಶಕಿ ಸಿಂಧೂ ಬಿ. ರೂಪೇಶ್ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯ ನಿರ್ದೇಶಕ ಕೂರ್ಮರಾವ್ ಉಪಸ್ಥಿತರಿದ್ದರು.