HomeUncategorizedಹಬ್ಬದ ರೀತಿಯಲ್ಲಿ ಹೊಸ ಶೈಕ್ಷಣಿಕ ವರ್ಷ ಆರಂಭಕ್ಕೆ ಸಕಲ ಸಿದ್ಧತೆ: ಸಚಿವ ಮಧು ಬಂಗಾರಪ್ಪ

ಹಬ್ಬದ ರೀತಿಯಲ್ಲಿ ಹೊಸ ಶೈಕ್ಷಣಿಕ ವರ್ಷ ಆರಂಭಕ್ಕೆ ಸಕಲ ಸಿದ್ಧತೆ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ‘ನಮ್ಮ ಶಾಲೆ, ನಮ್ಮ ಜವಾಬ್ದಾರಿ’ ಅಡಿಯಲ್ಲಿ ಹೊಸ ಶೈಕ್ಷಣಿಕ ವರ್ಷದ ಸ್ವಾಗತಕ್ಕೆ ಸಂಭ್ರಮದ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಹೊಸ ಶೈಕ್ಷಣಿಕ ವರ್ಷವನ್ನು ಹಬ್ಬದಂತೆ ಸ್ವಾಗತಿಸಲು ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಸಚಿವರು, ಜಿಲ್ಲಾಧಿಕಾರಿಗಳು ಸೇರಿದಂತೆ ಅನೇಕ ಗಣ್ಯರು ಮಕ್ಕಳನ್ನು ಆತ್ಮೀಯವಾಗಿ ಶಾಲೆಗೆ ಸ್ವಾಗತಿಸುವ ಹಾಗೂ ಶಿಕ್ಷಣ ಇಲಾಖೆಯು ಈ ವರ್ಷ ಕೈಗೊಂಡಿರುವ ಮಹತ್ವಪೂರ್ಣ ಸವಲತ್ತುಗಳು ಮತ್ತು ಸುಧಾರಣೆಗಳನ್ನು ಪರಿಚಯಿಸುವ ಬಗ್ಗೆ ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಸಲಾಗಿದೆ.

ಕೆಪಿಎಸ್ ಶಾಲೆಗಳ ಪ್ರಗತಿ, ಶಾಲೆಗಳಿಗೆ ಅಗತ್ಯವಾದ ಪೀಠೋಪಕರಣಗಳ ಒದಗಿಸುವುದು, ಪರೀಕ್ಷಾ ವ್ಯವಸ್ಥೆಯ ಸುಧಾರಣೆ, ಉಚಿತ ಪಠ್ಯಪುಸ್ತಕ ಹಾಗೂ ಸಮವಸ್ತ್ರ ವಿತರಣೆಯ ಕುರಿತಂತೆ, ಜೊತೆಗೆ ಶಿಕ್ಷಣ ಇಲಾಖೆಯ ಇತರ ಪ್ರಮುಖ ವಿಷಯಗಳ ಬಗ್ಗೆ ಉನ್ನತಾಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಲಾಯಿತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಸಭೆಯಲ್ಲಿ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್, ಶಾಲಾ ಶಿಕ್ಷಣ ಇಲಾಖೆಯ ಆಯುಕ್ತ ಡಾ. ತ್ರಿಲೋಕ್ ಚಂದ್ರ ಕೆ.ವಿ., ಪದವಿ ಪೂರ್ವ ಶಿಕ್ಷಣ ನಿರ್ದೇಶಕಿ ಸಿಂಧೂ ಬಿ. ರೂಪೇಶ್ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯ ನಿರ್ದೇಶಕ ಕೂರ್ಮರಾವ್ ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular