ಅತಿಯಾದ ಬೆಳ್ಳುಳ್ಳಿ ಸೇವನೆಯಿಂದ ಕಾಡುತ್ತೆ ಈ ಎಲ್ಲ ಸಮಸ್ಯೆ

ಬೆಳ್ಳುಳ್ಳಿ ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ. ಬೆಳ್ಳುಳ್ಳಿಯಲ್ಲಿ  ಕ್ಯಾಲ್ಸಿಯಂ, ತಾಮ್ರ, ಪೊಟ್ಯಾಸಿಯಮ್, ರಂಜಕ, ಕಬ್ಬಿಣ ಮತ್ತು ವಿಟಮಿನ್ ಬಿ 1 ಸೇರಿದಂತೆ ಅನೇಕ ಪೋಷಕಾಂಶಗಳಿವೆ. ಇದು ಆಹಾರದ ರುಚಿಯನ್ನು ಹೆಚ್ಚಿಸುವುದಲ್ಲದೆ, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಇದನ್ನು ಸಾಂಪ್ರದಾಯಿಕ ಆಹಾರದಲ್ಲಿ ಮಾತ್ರವಲ್ಲ ಫಾಸ್ಟ್ ಫುಡ್ ಗಳಲ್ಲೂ ಬಳಸಲಾಗುತ್ತಿದೆ. ಚಳಿಗಾಲದಲ್ಲಿ ಇದನ್ನು ಹೆಚ್ಚಾಗಿ ಸೇವನೆ ಮಾಡಲಾಗುತ್ತದೆ. ದೇಹವನ್ನು ಬೆಳ್ಳುಳ್ಳಿ ಬೆಚ್ಚಗಿಡುತ್ತದೆ ಎಂಬ ಕಾರಣಕ್ಕೆ ಇದ್ರ ಬಳಕೆಯನ್ನು ಹೆಚ್ಚು ಮಾಡ್ತಾರೆ. ಆದ್ರೆ ಬೆಳ್ಳುಳ್ಳಿ ಆರೋಗ್ಯಕ್ಕೆ ಎಷ್ಟು ಒಳ್ಳೆಯದೋ ಅಷ್ಟೇ ಆರೋಗ್ಯಕ್ಕೆ ಹಾನಿಕರ.ಅತಿಯಾಗಿ ಬೆಳ್ಳುಳ್ಳಿ ಸೇವನೆ ಮಾಡುವುದ್ರಿಂದ ಅನೇಕ ಅಡ್ಡಪರಿಣಾಮಗಳಿವೆ.

ಬೆಳ್ಳುಳ್ಳಿಯನ್ನು ಅತಿಯಾಗಿ ಸೇವಿಸುವುದರಿಂದ ನಿಮ್ಮ ರಕ್ತದೊತ್ತಡ  ಕಡಿಮೆಯಾಗುತ್ತದೆ. ಈಗಾಗಲೇ ಕಡಿಮೆ ರಕ್ತದೊತ್ತಡದ ಸಮಸ್ಯೆ ಇರುವವರು ಬೆಳ್ಳುಳ್ಳಿಯನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸಬಾರದು.

ಬೆಳ್ಳುಳ್ಳಿಯು ಆಹಾರದ ರುಚಿಯನ್ನು ಉತ್ತಮಗೊಳಿಸುತ್ತದೆ. ಆದರೆ ಅದರ ವಾಸನೆಯು ಸಾಕಷ್ಟು ಕಟುವಾಗಿರುತ್ತದೆ. ಇದನ್ನು ಅತಿಯಾಗಿ ಸೇವಿಸುವುದರಿಂದ ಬಾಯಿಯಲ್ಲಿ ದುರ್ವಾಸನೆ ಉಂಟಾಗುತ್ತದೆ. ಅಷ್ಟೇ ಅಲ್ಲ ಕೆಲವೊಮ್ಮೆ ಬೆವರಿನಿಂದ ಇದರ ವಾಸನೆ ಹೊರ ಬರುತ್ತದೆ. ಈಗಾಗಲೇ ಬಾಯಿಯ ದುರ್ವಾಸನೆ ಸಮಸ್ಯೆ ಹೊಂದಿರುವವರು ಹಾಗೂ ಬೆವರಿನ ವಾಸನೆ ಹೊಂದಿರುವವರು ಇದನ್ನು ಸೇವನೆ ಮಾಡಬಾರದು.

ಬೆಳ್ಳುಳ್ಳಿಯಲ್ಲಿ ಆಮ್ಲವಿರುತ್ತದೆ. ಬೆಳ್ಳುಳ್ಳಿಯ ಅತಿಯಾದ ಸೇವನೆಯು ಎದೆಯುರಿಯನ್ನು ಉಂಟುಮಾಡುತ್ತದೆ. ಈಗಾಗಲೇ ಆಸಿಡಿಟಿ ಸಮಸ್ಯೆ ಇರುವವರು ಬೆಳ್ಳುಳ್ಳಿಯ ಅತಿಯಾದ ಸೇವನೆಯಿಂದ ದೂರವಿರಬೇಕು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read