BIG NEWS : ಸಚಿವ ಚಲುವರಾಯಸ್ವಾಮಿ ವಿರುದ್ಧ ಲಂಚ ಆರೋಪ : ಪತ್ರ ಬರೆದ ಇಬ್ಬರು ‘ಸಿಐಡಿ’ ವಶಕ್ಕೆ

ಬೆಂಗಳೂರು : ಸಚಿವ ಚಲುವರಾಯಸ್ವಾಮಿ ವಿರುದ್ಧ ಲಂಚ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರಿಗೆ ಪತ್ರ ಬರೆದ ಇಬ್ಬರನ್ನು ಸಿಐಡಿ ವಶಕ್ಕೆ ಪಡೆಯಲಾಗಿದೆ.

ಕೆ.ಆರ್.ಪೇಟೆಯ ಕೃಷಿ ಅಧಿಕಾರಿಗಳಾದ ಶಿವಪ್ರಸಾದ್, ಗುರುದತ್ ಎನ್ನುವರನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ತನಿಖೆ ನಡೆಸಿದ್ದಾರೆ . ಈ ಪತ್ರ ಬರೆದಿರುವ ಹಿಂದಿನ ಉದ್ದೇಶವೇನು? ವಿವಿಧ ಆಯಾಮಗಳಲ್ಲಿ ಸಿಐಡಿ ಅಧಿಕಾರಿಗಳು ತನಿಖೆ ಮುಂದುವರೆಸಿದ್ದು,ತನಿಖೆಯಿಂದಷ್ಟೇ ಈ ಬಗ್ಗೆ ಮಾಹಿತಿ ಲಭ್ಯವಾಗಬೇಕಿದೆ.

ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಕೃಷಿ ಅಧಿಕಾರಿಗಳೇ ತಿರುಗಿಬಿದ್ದಿದ್ದು, ಸಚಿವರ ವಿರುದ್ಧ ರಾಜ್ಯಪಾಲರಿಗೆ ಪತ್ರ ಬರೆದ ವಿಚಾರ ರಾಜ್ಯಾದ್ಯಂತ ಭಾರಿ ಸುದ್ದಿಯಾಗಿದ್ದು, ಪ್ರಕರಣವನ್ನು ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ.

ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಲಂಚದ ಆರೋಪ ಮಾಡಿ ಕೆಲ ಕೃಷಿ ಅಧಿಕಾರಿಗಳು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಈ ಪ್ರಕರಣದ ತನಿಖೆಗೆ ಫೀಲ್ಡಿಗಿಳಿದಿರುವ ಸಿಐಡಿ ಅಧಿಕಾರಿಗಳು ಪತ್ರದ ಮೂಲ ಪತ್ತೆ ಮಾಡಿದ್ದರು. ಸಿಐಡಿ ಐಜಿಪಿ ಪ್ರವೀಣ್ ಮಧುಕರ್ ಪವಾರ್ ನೇತೃತ್ವದ ತಂಡ ಮಂಡ್ಯ ಕೃಷಿ ಜಂಟಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ನಿರ್ದೇಶಕ ಅಶೋಕ್ ಅವರಿಂದ ಮಾಹಿತಿ ಪಡೆದುಕೊಂಡಿದ್ದಾರೆ ರಾಜ್ಯಪಾಲರಿಗೆ ಬರೆದಿದ್ದಾರೆ ಎನ್ನಲಾದ ಪತ್ರ ಪೋಸ್ಟ್ ಆಗಿರುವುದು ಮೈಸೂರಿನ ಸರಸ್ವತಿಪುರಂ ಅಂಚೆಕಚೇರಿಯಿಂದ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಸಿಐಡಿ ಅದಿಕಾರಿಗಳು ಮೈಸೂರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read