
ಮೃತರನ್ನು ರಂಜಿತಾ (21) ಎಂದು ಗುರುತಿಸಲಾಗಿದೆ. ಗಂಡು ಮಗುವಿಗೆ ಜನ್ಮ ನೀಡಿದ್ದ ಈಕೆ ಹೊಟ್ಟೆ ನೋವಿನಿಂದ ನರಳಿ ನರಳಿ ಮೃತಪಟ್ಟಿದ್ದಾಳೆ ಎಂದು ಮೃತ ಮಹಿಳೆಯರ ಪೋಷಕರು ಆರೋಪಿಸಿದ್ದಾರೆ.
ಚಿಕ್ಕಮಗಳೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ವಡೇರಹಳ್ಳಿ ಮೂಲದ ಯುವತಿ ಕಳೆದ 1 ವರ್ಷದ ಹಿಂದೆಯಷ್ಟೇ ಮದುವೆಯಾಗಿದ್ದರು. ಆದರೆ ವೈದ್ಯರ ನಿರ್ಲಕ್ಷ್ಯಕ್ಕೆ ಮಹಿಳೆ ಸಾವನ್ನಪ್ಪಿದ್ದಾಳೆ ಎಂಬ ಆರೋಪ ಕೇಳಿಬಂದಿದೆ.ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಬಳಿಕ ಹೊಟ್ಟೆನೋವಿನಿಂದ ನರಳಿ ಮೃತಪಟ್ಟಿದ್ದಾಳೆ ಎನ್ನಲಾಗಿದೆ.

