BREAKING : ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ‘KKRTC’ ನೌಕರ ಆತ್ಮಹತ್ಯೆಗೆ ಯತ್ನ

ಕಲಬುರಗಿ : ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಡಿಪೋದಲ್ಲೇ  KKRTC  ನೌಕರ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕಲಬುರಗಿ ನಗರದ ಡಿಪೋ ದಲ್ಲಿ ನಡೆದಿದೆ.

ಡಿಪೋ ಮ್ಯಾನೇಜರ್ ತನಗೆ ವಿನಾಕಾರಣ ಕಿರುಕುಳ ನೀಡುತ್ತಿದ್ದಾರೆ, ಹೆಚ್ಚುವರಿ ಕೆಲಸ ಮಾಡುವಂತೆ ಒತ್ತಡ ಹಾಕುತ್ತಿದ್ದಾರೆ ಎಂದು ಚಾಲಕ ಕಂ ನಿರ್ವಾಹಕರಾಗಿ ಕೆಲಸ ಮಾಡುತ್ತಿರುವ ಬೀರಣ್ಣ ಆರೋಪಿಸಿದ್ದಾರೆ. ಇದರಿಂದ ಮನನೊಂದು ಬೀರಣ್ಣ ಡಿಪೋದಲ್ಲಿಯೇ ಡಿಸೇಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ಸ್ಥಳದಲ್ಲಿದ್ದವರು ಅವರನ್ನು ತಡೆದ್ದಾರೆ.

ಇತ್ತೀಚೆಗೆ ಮಂಡ್ಯ ಜಿಲ್ಲೆಯ ನಾಗಮಂಗಲದ ಕೆಎಸ್ಆರ್ಟಿಸಿ ಚಾಲಕ ಜಗದೀಶ್ ಎಂಬವರು ಡಿಪೋ ಆವರಣದಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಈ ವಿಚಾರ ರಾಜಕೀಯ ವಾಕ್ಸಮರಗಳಿಗೂ ಕಾರಣವಾಗಿತ್ತು, ಈ ಬೆನ್ನಲ್ಲೇ ಮತ್ತೋರ್ವ ನೌಕರ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read