ಪ್ರಧಾನಿ ಮೋದಿ ಭೇಟಿ ವೇಳೆ ‘ಶಿಷ್ಟಾಚಾರ’ ಪಾಲಿಸದ ಆರೋಪ : ಆರ್.ಅಶೋಕ್ ಗೆ ಡಿಸಿಎಂ ಡಿಕೆಶಿ ಡಿಚ್ಚಿ

ಬೆಂಗಳೂರು : ಪ್ರಧಾನಿ ಮೋದಿ ಬೆಂಗಳೂರಿಗೆ ಭೇಟಿ ನೀಡಿದ ವೇಳೆ ಕಾಂಗ್ರೆಸ್ ಶಿಷ್ಟಾಚಾರ ಪಾಲಿಸಿಲ್ಲ. ಕಾಂಗ್ರೆಸ್ ಗೆ ಕನಿಷ್ಟ ಜ್ಞಾನ ಇಲ್ಲ ಎಂದು ಮಾಜಿ ಸಚಿವ ಆರ್ ಅಶೋಕ್ ಕಿಡಿಕಾರಿದ್ದರು. ಇದಕ್ಕೆ ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಡಿಚ್ಚಿ ನೀಡಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ‘ಶಾಸಕ ಆರ್.   ಅಶೋಕ್ ಗೆ   ಸ್ವಲ್ಪ ಪ್ರಾಬ್ಲಂ ಇದೆ. ರಾಜಕೀಯ ಪ್ರಜ್ಞೆ, ಸಮಯ ಪ್ರಜ್ಞೆ ಎಲ್ಲವೂ ನಮಗೆ ಇದೆ. ಸರ್ಕಾರದ ವತಿಯಿಂದ ಪ್ರಧಾನಿ ಮೋದಿ ಸ್ವಾಗತ ಮಾಡಿಸಿದ್ದೇವೆ. ಯಾರಿಗೆ ಎಷ್ಟು ಗೌರವ ಕೊಡಬೇಕು ಅಂತಾ ನಮಗೆ ಗೊತ್ತಿದೆ, ಪ್ರಧಾನಮಂತ್ರಿ ಕಚೇರಿಯಿಂದ ನಮಗೆ ಕರೆ ಬಂದಿತ್ತು. ಕೇಂದ್ರ ಸರ್ಕಾರವೇ ಬರೋದು ಬೇಡ ಅಂತಾ ನಮಗೆ ಹೇಳಿತ್ತು ಎಂದು ಡಿಸಿಎಂ ಡಿಕೆ ಶಿವಕುಮಾರ್ ಡಿಚ್ಚಿ ನೀಡಿದ್ದಾರೆ.

ಬೇರೆ ರಾಜ್ಯಗಳ ರೀತಿ ಅಲ್ಲ ನಮ್ಮ ಸಂಸ್ಕೃತಿ. ರಾಜಕೀಯ ಭಿನ್ನಾಭಿಪ್ರಾಯಗಳು ಏನೇ ಇದ್ದರೂ ನಾವು ಪ್ರಧಾನಿಗೆ ಗೌರವ ಕೊಡುತ್ತೇವೆ, ಶಾಸಕ ಆರ್.  ಅಶೋಕ್ ಗೆ   ಸ್ವಲ್ಪ ಪ್ರಾಬ್ಲಂ ಇದೆ .  ಅಶೋಕ್ ಸುಖಾ ಸುಮ್ಮನೆ ಆರೋಪ ಮಾಡಬಾರದು ಎಂದು ತಿರುಗೇಟು ನೀಡಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read