HomeLatest NewsBREAKING : ಜೀವ ಬೆದರಿಕೆ ಆರೋಪ ; ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್‌ಗೆ ಪೊಲೀಸ್...

BREAKING : ಜೀವ ಬೆದರಿಕೆ ಆರೋಪ ; ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್‌ಗೆ ಪೊಲೀಸ್ ನೋಟಿಸ್.!

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 11ರ ಮಾಜಿ ಸ್ಪರ್ಧಿ ರಜತ್ ಕಿಶನ್ (ರಜತ್ ಬುಜ್ಜಿ) ಅವರಿಗೆ ಕೆ.ಆರ್. ಪುರಂ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಸಾಮಾಜಿಕ ಕಾರ್ಯಕರ್ತರೊಬ್ಬರಿಗೆ ಜೀವ ಬೆದರಿಕೆ ಹಾಕಿದ ಆರೋಪದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಸಾಮಾಜಿಕ ಕಾರ್ಯಕರ್ತ ಗಿರೀಶ್ ಕುಮಾರ್ ಎಂಬುವವರು ರಜತ್ ವಿರುದ್ಧ ದೂರು ದಾಖಲಿಸಿದ್ದರು. ಈ ದೂರಿನ ಆಧಾರದ ಮೇಲೆ ಪೊಲೀಸರು ಈಗ ರಜತ್ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಮತ್ತೊಬ್ಬ ಬಿಗ್ ಬಾಸ್ ಸ್ಪರ್ಧಿ ‘ಡಾಗ್ ಸತೀಶ್’ ಅವರ ಜೊತೆಗಿನ ಸ್ನೇಹವನ್ನು ಕೈಬಿಡಬೇಕು ಎಂದು ರಜತ್ ಅವರು ಗಿರೀಶ್ ಅವರಿಗೆ ಫೋನ್ ಮೂಲಕ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ಕಾರಿನ ಫೋಟೋ ಕಳುಹಿಸಿ ಧಮ್ಕಿ: ಗಿರೀಶ್ ಅವರ ಕಾರಿನ ಫೋಟೋವನ್ನು ಅವರಿಗೆ ವಾಟ್ಸಾಪ್ ಮೂಲಕ ಕಳುಹಿಸಿರುವ ರಜತ್, “ಸರ್ ಇದು ರಜತ್ ಬುಜ್ಜಿ, ಕಾಲ್ ಮಾಡ್ತಿದ್ದೀನಿ.. ವಾಪಸ್ ಕಾಲ್ ಮಾಡ್ತೀರಾ? ಇಲ್ಲ ನಾವೇ ಒಳಗೆ ಹಾಕಿಸಬೇಕಾ?” ಎಂದು ಸಂದೇಶ ಕಳುಹಿಸಿ ಬೆದರಿಸಿದ್ದಾರೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅವಾಚ್ಯ ಶಬ್ದಗಳಿಂದ ನಿಂದನೆ: ಕಾನ್ಫರೆನ್ಸ್ ಕಾಲ್‌ನಲ್ಲಿ ಗಿರೀಶ್ ಅವರನ್ನು ಕೆಟ್ಟ ಪದಗಳಿಂದ ನಿಂದಿಸಿ, ಪ್ರಾಣ ಬೆದರಿಕೆ ಹಾಕಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಪೊಲೀಸ್ ಕ್ರಮ

ಕೆ.ಆರ್. ಪುರಂ ಪೊಲೀಸರು ಈ ಬಗ್ಗೆ ಎಫ್‌ಐಆರ್ (FIR) ದಾಖಲಿಸಿಕೊಂಡಿದ್ದು, ಪ್ರಕರಣದ ತಾಂತ್ರಿಕ ಸಾಕ್ಷ್ಯಗಳನ್ನು (ಆಡಿಯೋ ಮತ್ತು ಮೆಸೇಜ್) ಪರಿಶೀಲಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ತಮ್ಮ ಹೇಳಿಕೆ ದಾಖಲಿಸಲು ಮತ್ತು ವಿಚಾರಣೆಗೆ ಸಹಕರಿಸಲು ರಜತ್ ಅವರಿಗೆ ಸೂಚನೆ ನೀಡಲಾಗಿದೆ. ರಜತ್ ಕಿಶನ್ ಈ ಹಿಂದೆ ಕೂಡ ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ ಪ್ರಕರಣದಲ್ಲಿ ಕಾನೂನು ಸಂಕಷ್ಟ ಎದುರಿಸಿದ್ದರು. ಈಗ ಈ ಹೊಸ ಪ್ರಕರಣ ಅವರ ಸುತ್ತ ಮತ್ತಷ್ಟು ಹರಡಿಕೊಂಡಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular