HomeKarnatakaಠಾಣೆಗೆ ಮಹಿಳೆ ಕರೆಸಿ ಹಲ್ಲೆ ಆರೋಪ: ಪೊಲೀಸರ ವಿರುದ್ಧ ವಕೀಲರ ಪ್ರತಿಭಟನೆ

ಠಾಣೆಗೆ ಮಹಿಳೆ ಕರೆಸಿ ಹಲ್ಲೆ ಆರೋಪ: ಪೊಲೀಸರ ವಿರುದ್ಧ ವಕೀಲರ ಪ್ರತಿಭಟನೆ

ಬೆಳಗಾವಿ: ಟಿಳಕವಾಡಿ ಪೊಲೀಸ್ ಠಾಣೆಗೆ ಮಹಿಳೆಯರನ್ನು ಕರೆಸಿ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಹಲ್ಲೆಯನ್ನು ಖಂಡಿಸಿ ಬೆಳಗಾವಿ ವಕೀಲರ ಸಂಘದಿಂದ ಬೆಳಗಾವಿ ನಗರ ಪೊಲೀಸ್ ಆಯುಕ್ತರ ಕಚೇರಿ ಎದುರು ಪ್ರತಿಭಟನೆ ನಡೆಸಲಾಗಿದೆ.

ಕಾಂಚನಾ ಗೌಳಿ ಅವರನ್ನು ಕರೆಸಿ ಹಲ್ಲೆ ನಡೆಸಲಾಗಿದೆ. ಮನೆ ಜಾಗದ ಕುರಿತಾಗಿ ಕಾಂಚನಾ ಸಂಬಂಧಿಕರು ಕೇಸು ದಾಖಲಿಸಿದ್ದರು. ಪ್ರಕರಣದ ಸಂಬಂಧ ಟಿಳಕವಾಡಿ ಠಾಣೆಗೆ ಕರೆಸಿಕೊಂಡು ಹಲ್ಲೆ ಮಾಡಿರುವುದಾಗಿ ಟಿಳಕವಾಡಿ ಪೊಲೀಸರ ವಿರುದ್ಧ ಧಿಕ್ಕಾರ ಕೂಗಿ ವಕೀಲರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೋಮವಾರದೊಳಗೆ ಹಲ್ಲೆ ಮಾಡಿದವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಲಾಗಿದ್ದು, ಇಲ್ಲವಾದರೆ ಕೋರ್ಟ್ ಕಲಾಪ ಬಹಿಷ್ಕರಿಸಿ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಲಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ವಾಪಸ್ ಪಡೆಯಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular