ಭಾರತದ ಸಾರ್ವತ್ರಿಕ ಚುನಾವಣೆಯಲ್ಲಿ ಅಮೆರಿಕ ಹಸ್ತಕ್ಷೇಪ ಆರೋಪ; ಹೀಗಿದೆ US ಪ್ರತಿಕ್ರಿಯೆ

ಭಾರತದಲ್ಲಿ ಪ್ರಸ್ತುತ ನಡೆಯುತ್ತಿರುವ ಲೋಕಸಭಾ ಚುನಾವಣೆಯಲ್ಲಿ ಅಮೆರಿಕ ಹಸ್ತಕ್ಷೇಪ ಮಾಡುತ್ತಿದೆ. ಈ ಮೂಲಕ ತನ್ನ ಗುರಿ ಸಾಧಿಸಲು ಯತ್ನಿಸುತ್ತಿದೆ ಎಂಬ ರಷ್ಯಾ ಆರೋಪವನ್ನು ಅಮೆರಿಕ ತಳ್ಳಿ ಹಾಕಿದೆ.

ಈ ಕುರಿತಂತೆ ಮಾತನಾಡಿರುವ ಅಮೆರಿಕ ವಿದೇಶಾಂಗ ಇಲಾಖೆ ವಕ್ತಾರ ಮ್ಯಾಥ್ಯೂ ಮಿಲ್ಲರ್, ಭಾರತದಲ್ಲಿ ನಡೆಯುತ್ತಿರುವ ಚುನಾವಣೆಯಲ್ಲಿ ನಮ್ಮ ಯಾವುದೇ ಪಾತ್ರವಿಲ್ಲ. ಅದನ್ನು ಅಲ್ಲಿಯ ಜನರು ತೆಗೆದುಕೊಳ್ಳಬೇಕಾದ ನಿರ್ಧಾರ. ರಷ್ಯಾದ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದಿದ್ದಾರೆ.

ಇತ್ತೀಚೆಗೆ ಅಮೆರಿಕ, ಭಾರತದಲ್ಲಿ ನಡೆದಿದ್ದ ಕೆಲ ಬೆಳವಣಿಗೆಗಳ ಕುರಿತು ಕಳವಳ ವ್ಯಕ್ತಪಡಿಸಿದ್ದಲ್ಲದೆ, ಗುರುಪತ್ವಂತ್ ಸಿಂಗ್ ಪನ್ನು ಹತ್ಯೆ ಸಂಚು ಕುರಿತು ವಾಷಿಂಗ್ಟನ್ ಪೋಸ್ಟ್ ವರದಿಯನ್ನು ಉಲ್ಲೇಖಿಸಿ ರಷ್ಯಾ ವಿದೇಶಾಂಗ ಸಚಿವಾಲಯದ ವಕ್ತಾರೆ ಮಾರಿಯಾ ಜಕ್ಕೊರ್ವಾ ಈ ಆರೋಪ ಮಾಡಿದ್ದರು. ಇದಕ್ಕೆ ಈಗ ಅಮೆರಿಕ ಪ್ರತಿಕ್ರಿಯೆ ವ್ಯಕ್ತಪಡಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read