HomeKarnatakaಪಡಿತರ ಚೀಟಿದಾರರೇ ಗಮನಿಸಿ; ಮೇ ಮಾಹೆಗೆ ಪಡಿತರ ಹಂಚಿಕೆ

ಪಡಿತರ ಚೀಟಿದಾರರೇ ಗಮನಿಸಿ; ಮೇ ಮಾಹೆಗೆ ಪಡಿತರ ಹಂಚಿಕೆ

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ದಾವಣಗೆರೆ ಜಿಲ್ಲೆಯಲ್ಲಿನ ಪಡಿತರ ಚೀಟಿದಾರರಿಗೆ ಮೇ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯ ಹಂಚಿಕೆ ಮಾಡಲಾಗಿದೆ.

ಅಂತ್ಯೋದಯ ಪಡಿತರ ಚೀಟಿದಾರರಿಗೆ ಪ್ರತಿ ಕಾರ್ಡ್‍ಗೆ 35 ಕೆ.ಜಿ ಅಕ್ಕಿ, ಆದ್ಯತಾ ಹಾಗೂ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ 5 ಕೆ.ಜಿ ಅಕ್ಕಿ ಉಚಿತವಾಗಿ ವಿತರಿಸಲಾಗುತ್ತದೆ. ಹಾಗೂ ಪ್ರತಿ ಕೆ.ಜಿ. ಗೆ ರೂ.15 ರಂತೆ ಒಪ್ಪಿಗೆ ನೀಡಿದ ಎ.ಪಿ.ಎಲ್ ಏಕ ಸದಸ್ಯ ಪಡಿತರ ಚೀಟಿದಾರರಿಗೆ 5 ಕೆ.ಜಿ, ಎರಡು ಮತ್ತು ಹೆಚ್ಚಿನ ಸದಸ್ಯರನ್ನು ಹೊಂದಿರುವವರಿಗೆ 10 ಕೆ.ಜಿ ಅಕ್ಕಿಯನ್ನು ವಿತರಿಸಲಾಗುವುದು.

ಸರ್ಕಾರದ ಗ್ಯಾರಂಟಿ ಯೋಜನೆಯಡಿ 5 ಕೆ.ಜಿ ಅಕ್ಕಿ ಬದಲಾಗಿ ಪಡಿತರ ಚೀಟಿದಾರರಿಗೆ ನೇರ ನಗದು ವರ್ಗಾವಣೆ ಮಾಡುತ್ತಿದ್ದು, ಯಾವುದೇ ರೀತಿಯ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪರಿಹರಿಸಿಕೊಳ್ಳಬಹುದೆಂದು ತಹಶೀಲ್ದಾರ್ ಡಾ.ಎಂ.ಬಿ.ಅಶ್ವಥ್ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular