HomeLatest Newsಸೇವಾನಿರತ ಅಭ್ಯರ್ಥಿಗಳಿಗೆ ವೈದ್ಯಕೀಯ ಎಂಡಿ/ಎಂಎಸ್ ಗೆ ಲಭ್ಯವಿರುವ ಸೀಟು ಹಂಚಿಕೆ

ಸೇವಾನಿರತ ಅಭ್ಯರ್ಥಿಗಳಿಗೆ ವೈದ್ಯಕೀಯ ಎಂಡಿ/ಎಂಎಸ್ ಗೆ ಲಭ್ಯವಿರುವ ಸೀಟು ಹಂಚಿಕೆ

ಸ್ನಾತಕೋತ್ತರ ವೈದ್ಯಕೀಯ ಕೋರ್ಸುಗಳಾದ ಎಂ.ಡಿ./ಎಂ.ಎಸ್.ಗೆ ಲಭ್ಯವಿರುವ ಸೀಟುಗಳಿಗಾಗಿ ಆಸಕ್ತ ಅರ್ಹ ಸೇವಾನಿರತ ಅಭ್ಯರ್ಥಿಗಳು ಫೆ,10ರ ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರೊಳಗೆ ಎಲ್ಲ ಅಗತ್ಯ ದಾಖಲೆಗಳೊಂದಿಗೆ ಇಲ್ಲಿನ ಮಲ್ಲೇಶ್ವರದಲ್ಲಿರುವ ಕೆಇಎ ಕಚೇರಿಗೆ ಪರಿಶೀಲನೆಗೆ ಹಾಜರಾಗಲು ಅವಕಾಶ ಕಲ್ಪಿಸಲಾಗಿದೆ..

ಸ್ನಾತಕೋತ್ತರ ವೈದ್ಯಕೀಯ ಕೋರ್ಸುಗಳ 3ನೇ ಸುತ್ತಿನ (ಮಾಪ್-ಅಪ್) ಆನ್ ಲೈನ್ ಸೀಟು ಹಂಚಿಕೆಗೆ ಇದು ಅನ್ವಯವಾಗುತ್ತದೆ. ದಾಖಲೆಗಳ ಪರಿಶೀಲನೆಯ ನಂತರ ಅರ್ಹರಾಗುವ ಅಭ್ಯರ್ಥಿಗಳಿಗೆ ಇಚ್ಛೆ/ಆಯ್ಕೆಗಳನ್ನು ನಮೂದಿಸಲು ಫೆ.11ರ ಬೆಳಿಗ್ಗೆ 9ರವರೆಗೆ ಅವಕಾಶವಿರುತ್ತದೆ

ರಾಜೀವ್ ಗಾಂಧಿ ಆರೋಗ್ಯ ವಿ.ವಿ.ಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸುಗಳಾದ ಎಂ.ಡಿ./ಎಂ.ಎಸ್.ಗೆ ಪರ್ಸೆಂಟೈಲ್ ಕಡಿತಗೊಳಿಸಿದ ನಂತರ ಅರ್ಹ ವೈದ್ಯರ ಪಟ್ಟಿಯನ್ನು ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular