HomeKarnatakaಸಿಇಟಿ ಪರೀಕ್ಷಾ ಕೇಂದ್ರ ಬದಲಾವಣೆಗೆ ಅವಕಾಶ

ಸಿಇಟಿ ಪರೀಕ್ಷಾ ಕೇಂದ್ರ ಬದಲಾವಣೆಗೆ ಅವಕಾಶ

ಬೆಂಗಳೂರು: ಸಿಇಟಿ ಅರ್ಜಿ ಭರ್ತಿ ಮಾಡುವ ಸಂದರ್ಭದಲ್ಲಿ ಪರೀಕ್ಷಾ ಕೇಂದ್ರಗಳನ್ನು ತಪ್ಪಾಗಿ ಆಯ್ಕೆ ಮಾಡಿಕೊಂಡ ಕೆಲವು ಅಭ್ಯರ್ಥಿಗಳಿಗೆ ಪರೀಕ್ಷಾ ಕೇಂದ್ರ ಬದಲಾವಣೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಾಲಾವಕಾಶ ನೀಡಿದೆ.

ತಪ್ಪಾಗಿ ಪರೀಕ್ಷಾ ಕೇಂದ್ರ ಆಯ್ಕೆ ಮಾಡಿಕೊಂಡ ಕಲಬುರಗಿ ಜಿಲ್ಲೆಯ ಕೆಲವು ಅಭ್ಯರ್ಥಿಗಳು ತಾವು ವ್ಯಾಸಂಗ ಮಾಡಿರುವ ಪಿಯು ಕಾಲೇಜಿನ ಪ್ರಾಂಶುಪಾಲರ ಮೂಲಕ ಏಪ್ರಿಲ್ 12ರೊಳಗೆ ಮನವಿ ಸಲ್ಲಿಸಲು ಕೆಇಎ ಸೂಚಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆಲವು ಅಭ್ಯರ್ಥಿಗಳು ತಮಗೆ ಕೋಲಾರ ಜಿಲ್ಲೆಯಲ್ಲಿ ಪರೀಕ್ಷಾ ಕೇಂದ್ರ ಹಂಚಿಕೆಯಾಗಿದೆ ಎಂದು ಪ್ರಾಧಿಕಾರಕ್ಕೆ ತಿಳಿಸಿದ ಕಾರಣ ಅವರ ಅರ್ಜಿ ಪರಿಶೀಲಿಸಲಾಗಿದ್ದು, ವಿದ್ಯಾರ್ಥಿಗಳೇ ಎಡಿಟ್ ಸಂದರ್ಭದಲ್ಲಿ ಕೋಲಾರ ಜಿಲ್ಲೆ ಆಯ್ಕೆ ಮಾಡಿಕೊಂಡಿರುವುದು ದೃಢಪಟ್ಟಿದೆ. ತಪ್ಪಾಗಿ ಪರೀಕ್ಷೆ ಕೇಂದ್ರ ಆಯ್ಕೆ ಮಾಡಿರುವ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರ ಬದಲಾವಣೆಗೆ ಅವರು ವ್ಯಾಸಂಗ ಮಾಡಿದ ಪಿಯು ಕಾಲೇಜಿನ ಪ್ರಾಂಶುಪಾಲರ ಮೂಲಕ ಸಕಾರಣ ನೀಡಿ ಮನವಿ ಸಲ್ಲಿಸಬೇಕು.

ಮನವಿಯಲ್ಲಿ ಅಭ್ಯರ್ಥಿಯ ಹೆಸರು, ಅರ್ಜಿ ಸಂಖ್ಯೆ, ಸಿಇಟಿ ಪತ್ರ ಸಂಖ್ಯೆ, ಪ್ರವೇಶ ಪತ್ರದ ಪ್ರತಿ ಸಲ್ಲಿಸಬೇಕು. ಕಾಲೇಜಿನ ಪ್ರಾಂಶುಪಾಲರು ಅಭ್ಯರ್ಥಿಗಳ ಪಟ್ಟಿಯನ್ನು ಪ್ರಾಧಿಕಾರಕ್ಕೆ ಇ-ಮೇಲ್([email protected]) ಮೂಲಕ ಏಪ್ರಿಲ್ 12ರಂದು ಸಂಜೆ 5 ಗಂಟೆಯೊಳಗೆ ಸಲ್ಲಿಸಬೇಕು.

ಕಲಬುರಗಿಯಲ್ಲಿ ಓದುತ್ತಿರುವ ಅಭ್ಯರ್ಥಿಗಳಿಗೆ ಜೇವರ್ಗಿ, ಬೀದರ್, ಯಾದಗಿರಿಯಲ್ಲಿ ಪರೀಕ್ಷಾ ಕೇಂದ್ರ ಹಂಚಿಕೆಯಾಗಿದ್ದಲ್ಲಿ ಅಂತಹ ಅಭ್ಯರ್ಥಿಗಳು ಮನವಿ ಸಲ್ಲಿಸುವಂತಿಲ್ಲ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular