HomeKarnatakaBudget Breaking : ಬೆಂಗಳೂರು ಸೇರಿ 11 ನಗರಗಳಲ್ಲಿ ರಾತ್ರಿ 1 ಗಂಟೆವರೆಗೆ ವ್ಯಾಪಾರ ವಹಿವಾಟಿಗೆ...

Budget Breaking : ಬೆಂಗಳೂರು ಸೇರಿ 11 ನಗರಗಳಲ್ಲಿ ರಾತ್ರಿ 1 ಗಂಟೆವರೆಗೆ ವ್ಯಾಪಾರ ವಹಿವಾಟಿಗೆ ಅವಕಾಶ

ಬೆಂಗಳೂರು : ಬೆಂಗಳೂರು ಸೇರಿ ಈ 11 ನಗರಗಳಲ್ಲಿ ರಾತ್ರಿ 1 ಗಂಟೆವರೆಗೆ ವ್ಯಾಪಾರ ವಹಿವಾಟಿಗೆ ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದೆ. ಈ ನಗರಗಳಲ್ಲಿ ರಾತ್ರಿ 11 ಗಂಟೆಯವರೆಗೆ ವ್ಯಾಪಾರ ವಹಿವಾಟಿಗೆ ಅವಕಾಶ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ವಾಣಿಜ್ಯ ಮತ್ತು ವ್ಯಾಪಾರದ ಹಿತದೃಷ್ಟಿಯಿಂದ ರಾತ್ರಿಯ ವೇಳೆ ವ್ಯಾಪಾರ ವಹಿವಾಟಿನ ಸಮಯವನ್ನು ಹೆಚ್ಚಿಸಲಾಗಿದೆ, ವ್ಯಾಪಾರ ವಹಿವಾಟು ಮಾಡಲು ಬೆಳಗಿನ ಜಾವ 1:00 ಗಂಟೆಯವರೆಗೆ ಅವಕಾಶ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಬಿಬಿಎಂಪಿ ಸೇರಿ ರಾಜ್ಯದಲ್ಲಿ ಬಳ್ಳಾರಿ, ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ ತುಮಕೂರು, ವಿಜಯಪುರ ಮಹಾನಗರಪಾಲಿಕೆಗಳಿದ್ದು, ಈ ಎಲ್ಲಾ ಮಹಾನಗರ ವ್ಯಾಪ್ತಿಗಳಲ್ಲಿ ಇನ್ನೂ ಮುಂದೆ ರಾತ್ರಿ 1:00 ಗಂಟೆಯವರೆಗೆ ವ್ಯಾಪಾರ ವಹಿವಾಟು ನಡೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರಿನ ಬಡಜನರಿಗೆ ಉಚಿತ ಪ್ರಯೋಗಾಲಯ ಸೇವೆ ಒದಗಿಸಲಾಗುವುದು. ಇದಕ್ಕೆ 430 ಪ್ರಯೋಗಾಲಯಗಳ ಸ್ಥಾಪನೆಗೆ 20 ಕೋಟಿ ಮೀಸಲು ಇಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಣೆ ಮಾಡಿದರು. ವೈದ್ಯಕೀಯ ಕಾಲೇಜುಗಳ ನಿರ್ಮಾಣ, ಉಪಕರಣ ಖರೀದಿಗೆ 400 ಕೋಟಿ ಅನುದಾನ ನೀಡಲಾಗುವುದು ಎಂದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular