ಎತ್ತಿನಭುಜ ಚಾರಣಕ್ಕೆ ಸಾರ್ವಜನಿಕರಿಗೆ ಅವಕಾಶ ; ಕಾರಣ ಕೇಳಿ ನೋಟಿಸ್ ಜಾರಿ..!

ಬೆಂಗಳೂರು : ಚಿಕ್ಕಮಗಳೂರು ವಿಭಾಗದ ಮೂಡಿಗೆರೆ ವಲಯದ ಎತ್ತಿನಭುಜ ಚಾರಣ ಪಥದಲ್ಲಿ ನಿರ್ಬಂಧ ವಿಧಿಸಿದ್ದರೂ ಜೂನ್ 15 ರಿಂದ 17ರವರೆಗೆ ಸಾವಿರಾರು ಚಾರಣಿಗರು ಬಂದು ಹೋಗಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿತ್ತು.

ಈ ಕುರಿತು ಎತ್ತಿನಭುಜ ಚಾರಣಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿದ್ದರೂ ಸಹ ಸಾರ್ವಜನಿಕರಿಗೆ ಅವಕಾಶ ನೀಡಿದ ಕಾರಣ ಸದರಿ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಮುಖ್ಯಮಂತ್ರಿ ಕಚೇರಿಯ ಸಾರ್ವಜನಿಕ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳ ಆದೇಶದ ಮೇರೆಗೆ ಚಿಕ್ಕಮಗಳೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯಿಂದ ಕಾರಣ ಕೇಳಿ ನೋಟಿಸ್ ನೀಡಲಾಗಿದೆ.

ಅಲ್ಲದೇ, ಚಾರಣಕ್ಕೆ ಸಾರ್ವಜನಿಕರನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಸುತ್ತಮುತ್ತಲಿನ ಹೋಂ ಸ್ಟೇಗಳಲ್ಲಿ ತಂಗುವ ಪ್ರವಾಸಿಗರಿಗೆ ಎತ್ತಿನಭುಜಕ್ಕೆ ಚಾರಣಕ್ಕೆ ಅವಕಾಶ ಇರುವುದಿಲ್ಲವೆಂದು ತಿಳಿಸಲು ಸೂಚಿಸಲಾಗಿರುತ್ತದೆ. ಸದರಿ ವಿಷಯದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ಕರ್ತವ್ಯಲೋಪ ಎಸಗಿರುವುದು ಕಂಡು ಬಂದಲ್ಲಿ ಕಾನೂನು ರೀತಿಯ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. ಸ್ಥಳೀಯವಾಗಿ ನೀವು ಎದುರಿಸುತ್ತಿರುವ ಸಮಸ್ಯೆಗಳನ್ನು ನಮ್ಮ ಗಮನಕ್ಕೆ ತರಲು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯ ಅಧಿಕಾರಿಗಳ @osd_cmkarnataka `ಎಕ್ಸ್ʼ ಖಾತೆಗೆ ಟ್ಯಾಗ್ ಮಾಡಿ  ಎಂದು ರಾಜ್ಯ ಸರ್ಕಾರ ತಿಳಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read