ಹೈದರಾಬಾದ್: ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ-ಇಡಿ ಅಧಿಕಾರಿಗಳು ನಟ ಅಲ್ಲು ಅರ್ಜುನ್ ತಂದೆ ಅಲ್ಲು ಅರವಿಂದ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ಅಲ್ಲು ಅರವಿಂದ್ ಅವರನ್ನು ಮೂರು ಗಂಟೆ ವಿಚಾರಣೆ ನಡೆಸಿದ್ದಾರೆ. ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ.
ಹೈದರಾಬಾದ್ ನ ರಾಮಕೃಷ್ಣ ಎಲೆಖ್ತ್ರಾನಿಕ್ ಕಂಪನಿಗೆ ಸಂಬಂಧಿಸಿದಂತೆ 101 ಕೋಟಿ ಬ್ಯಾಂಕ್ ಸಾಲ ವಂಚನೆ ಪ್ರಕರಣದಲ್ಲಿ ಅಲ್ಲು ಅರವಿಂದ್ ವಿಚಾರಣೆ ಎದುರಿಸುತ್ತಿದ್ದಾರೆ. ರಾಮಕೃಷ್ಣ ಎಲೆಖ್ತ್ರಾನಿಕ್ಸ್ ಹಾಗೂ ಅಲ್ಲು ಅರವಿಂದ್ ಒಡೆತನದ ಕಂಪನಿಗಳ ನಡುವೆ ಕೆಲವು ಅನುಮಾನಾಸ್ಪದ ಹಣಕಾಸಿನ ವಹಿವಾಟುಗಳಾಗಿವೆ. ಈ ಹಿನ್ನೆಲೆಯಲ್ಲಿ ಇಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.