‘ಪುಷ್ಪ’ ಹಾಗೂ ‘ರಾಕಾ’ (Raaka) ಸಿನಿಮಾಗಳ ಮೂಲಕ ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಿರುವ ಐಕಾನ್ ಸ್ಟಾರ್ ಅಲ್ಲು ಅರ್ಜುನ್ (Allu Arjun) ಅವರ ಮುಂದಿನ ೨೩ನೇ ಚಿತ್ರದ (AA23) ಬಗ್ಗೆ ಹರಿದಾಡುತ್ತಿದ್ದ ಎಲ್ಲಾ ವದಂತಿಗಳಿಗೆ ಕೊನೆಗೂ ತೆರೆಬಿದ್ದಿದೆ. ಕಾಲಿವುಡ್‌ನ ಮಾಸ್ ನಿರ್ದೇಶಕ ಲೋಕೇಶ್ ಕನಕರಾಜ್ (Lokesh Kanagaraj) ಜೊತೆಗಿನ ಅಲ್ಲು ಅರ್ಜುನ್ ಸಿನಿಮಾ ಕೈಬಿಡಲಾಗಿದೆ ಹಾಗೂ ಅವರಿಬ್ಬರ ಕಾಂಬಿನೇಷನ್ ರದ್ದಾಗಿದೆ ಎಂಬ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿತ್ತು.
ಆದರೆ, ಈ ಸುದ್ದಿಯಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂಬ ಮಾಹಿತಿ ಹೊರಬಿದ್ದಿದ್ದು, ಸಿನಿಮಾ ಸಂಪೂರ್ಣವಾಗಿ ಸುಸ್ಥಿತಿಯಲ್ಲಿದೆ. ಸದ್ಯ ಹಿನ್ನೆಲೆಯಲ್ಲಿ ಯಾವುದೇ ಗದ್ದಲವಿಲ್ಲದೆ ಅತ್ಯಂತ ನಿಶ್ಯಬ್ದವಾಗಿ ಸಿನಿಮಾದ ಪ್ರೀ-ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗಿವೆ. ಅಲ್ಲು ಅರ್ಜುನ್ ತಮ್ಮ ಪ್ರಸ್ತುತ ‘ರಾಕಾ’ ಚಿತ್ರದ ಶೂಟಿಂಗ್ ಪೂರ್ಣಗೊಳಿಸುತ್ತಿದ್ದಂತೆಯೇ ಲೋಕೇಶ್ ಕನಕರಾಜ್ ಅವರ ಈ ಬಿಗ್ ಬಜೆಟ್ ಸಿನಿಮಾದ ಸೆಟ್‌ಗೆ ಕಾಲಿಡಲಿದ್ದಾರೆ.
ಮೈತ್ರಿ ಮೂವಿ ಮೇಕರ್ಸ್ (Mythri Movie Makers) ಬ್ಯಾನರ್‌ನಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ (Anirudh Ravichander) ಮ್ಯೂಸಿಕ್ ನೀಡುತ್ತಿದ್ದಾರೆ. ಈ ಚಿತ್ರಕ್ಕಾಗಿ ಅನಿರುದ್ಧ್ ಸಂಯೋಜಿಸಿದ್ದ ‘AA23’ ಥೀಮ್ ಮ್ಯೂಸಿಕ್ ಎಷ್ಟರಮಟ್ಟಿಗೆ ಹಿಟ್ ಆಗಿತ್ತೆಂದರೆ, ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಇನ್‌ಸ್ಟಾಗ್ರಾಮ್ ಪೋಸ್ಟ್ ಒಂದರಲ್ಲಿ ಅದನ್ನು ಬಳಸಿಕೊಂಡಿದ್ದರು. ಶೀಘ್ರದಲ್ಲೇ ಈ ಚಿತ್ರದ ಪ್ರಮುಖ ಅಪ್ಡೇಟ್‌ಗಳನ್ನು ಚಿತ್ರತಂಡ ಅಧಿಕೃತವಾಗಿ ಹಂಚಿಕೊಳ್ಳಲಿದೆ.

