HomeEntertainmentBREAKING NEWS: ನಟ ಅಲ್ಲು ಅರ್ಜುನ್ ಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್: ಮಧ್ಯಂತರ ಜಾಮೀನು...

BREAKING NEWS: ನಟ ಅಲ್ಲು ಅರ್ಜುನ್ ಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್: ಮಧ್ಯಂತರ ಜಾಮೀನು ಮಂಜೂರು

ಹೈದರಾಬಾದ್: ಥಿಯೇಟರ್ ನಲ್ಲಿ ಸಂಭವಿಸಿದ್ದ ಕಾಲ್ತುಳಿತ ಘಟನೆಯಲ್ಲಿ ಮಹಿಳೆ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ತೆಲುಗು ಖ್ಯಾತ ನಟ ಅಲ್ಲು ಅರ್ಜುನ್ ಗೆ ತೆಲಂಗಾಣ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.

14 ದಿನಗಳ ನ್ಯಾಯಾಂಗ ಬಂಧನಕ್ಕೀಡಾಗಿದ್ದ ನಟ ಅಲ್ಲು ಅರ್ಜುನ್ ಗೆ ತೆಲಂಗಾಣ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಈ ಹಿನ್ನೆಲೆಯಲ್ಲಿ ನಾಂಪಲ್ಲಿ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದ್ದ ಕೆಲವೇ ಗಂಟೆಗಳಲ್ಲಿ ಅಲ್ಲು ಅರ್ಜುನ್ ಗೆ ಜಾಮೀನು ಮಂಜೂರಾಗಿದೆ.

‘ಪುಷ್ಪ 2 ಚಿತ್ರದ ಪ್ರೀಮಿಯರ್ ಪ್ರದರ್ಶನದ ವೇಳೆ ಹೈದರಾಬಾದ್ ನ ಸಂಧ್ಯಾ ಥಿಯೇಟರ್‌ ನಲ್ಲಿ ಕಾಲ್ತುಳಿತ ಸಂಭವಿಸಿ ರೇವತಿ (39)ಎಂಬ ಮಹಿಳೆ ಸಾವನ್ನಪ್ಪಿದ್ದರು. ಪ್ರಕರಣ ಸಂಬಂಧ ಥಿಯೆಟರ್ ಮಾಲೀಕ, ಇಬ್ಬರು ವ್ಯವಸ್ಥಾಪಕರು ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದರು. ಈ ಪ್ರಕರಣದಲ್ಲಿ ನಟ ಅಲ್ಲು ಅರ್ಜುನ್ ಅವರನ್ನು ಕೂಡ ಇಂದು ಚಿಕ್ಕಡಪಲ್ಲಿ ಠಾಣೆ ಪೊಲೀಸರು ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಿದ್ದರು. ನಾಂಪಲ್ಲಿ ಕೋರ್ಟ್ ನಟ ಅಲ್ಲು ಅರ್ಜುನ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಕರಣ ರದ್ದು ಕೋರಿ ಹಾಗೂ ಬಂಧನ ಪ್ರಶ್ನಿಸಿ ಅಲ್ಲು ಅರ್ಜುನ್ ಪರ ವಕೀಲರು ತೆಲಂಗಾಣ ಹೈಕೋರ್ಟ್ ಗೆ ಅರ್ಜ್ಜಿ ಸಲ್ಲಿಸಿದ್ದರು. ಅರ್ಜಿಯ ತುರ್ತು ವಿಚರಣೆ ನಡೆಸುವಂತೆ ಮನವಿ ಮಾಡಿದ್ದರು. ಇದೀಗ ಅರ್ಜಿ ತುರ್ತು ವಿಚಾರಣೆ ನಡೆಸಿದ ಹೈಕೋರ್ಟ್, ಅಲ್ಲು ಅರ್ಜುನ್ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ವೈಯಕ್ತಿಕ ಬಾಂಡ್ ನಡಿ ಬಿಡುಗಡೆ ಮಾಡುವಂತೆ ಆದೇಶ ನೀಡಿದೆ.

 

For Latest News Updates, Join Our Whatsapp Community🚩
RELATED ARTICLES

Most Popular