HomeEntertainmentBREAKING NEWS: ಬಂಧಿತ ನಟ ಅಲ್ಲು ಅರ್ಜುನ್ ಗೆ ನ್ಯಾಯಾಂಗ ಬಂಧನ: ಜೈಲುಪಾಲು

BREAKING NEWS: ಬಂಧಿತ ನಟ ಅಲ್ಲು ಅರ್ಜುನ್ ಗೆ ನ್ಯಾಯಾಂಗ ಬಂಧನ: ಜೈಲುಪಾಲು

ಹೈದರಾಬಾದ್: ಥಿಯೇಟರ್ ನಲ್ಲಿ ಕಾಲ್ತುಳಿತದಲ್ಲಿ ಮಹಿಳೆ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ತೆಲುಗು ಚಿತ್ರರಂಗದ ಖ್ಯಾತ ನಟ ಅಲ್ಲು ಅರ್ಜುನ್ ಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ.

ಚಿಕ್ಕಡಪಲ್ಲಿ ಠಾಣೆ ಪೊಲೀಸರಿಂದ ಬಂಧಿಸಲ್ಪಟ್ಟಿದ್ದ ನಟ ಅಜ್ಜು ಅರ್ಜುನ್ ಅವರನ್ನು ಪೊಲೀಸರು ನಾಂಪಲ್ಲಿ ಕೋರ್ಟ್ ಗೆ ಹಾಜರುಪಡಿಸಿದ್ದರು. ಈ ವೇಳೆ ಕೋರ್ಟ್ ಅಲ್ಲು ಅರ್ಜುನ್ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಅಜ್ಜು ಅರ್ಜುನ್ ಜೈಲುಪಾಲಾಗಿದ್ದಾರೆ.

‘ಪುಷ್ಪ 2 ಚಿತ್ರದ ಪ್ರೀಮಿಯರ್ ಪ್ರದರ್ಶನದ ವೇಳೆ ಹೈದರಾಬಾದ್ ನ ಸಂಧ್ಯಾ ಥಿಯೇಟರ್‌ ನಲ್ಲಿ ಕಾಲ್ತುಳಿತ ಸಂಭವಿಸಿ ರೇವತಿ (39)ಎಂಬ ಮಹಿಳೆ ಸಾವನ್ನಪ್ಪಿದ್ದರು. ಪ್ರಕರಣ ಸಂಬಂಧ ಥಿಯೆಟರ್ ಮಾಲೀಕ, ಇಬ್ಬರು ವ್ಯವಸ್ಥಾಪಕರು ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದರು. ಇದೀಗ ಈ ಪ್ರಕರಣದಲ್ಲಿ ನಟ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಿದ್ದರು. ಕೋರ್ಟ್ ನಟನಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular