BIG NEWS: ‘ಪುಷ್ಪಾ 2’ ಚಿತ್ರದ ಕ್ಲೈಮ್ಯಾಕ್ಸ್ ದೃಶ್ಯ ಲೀಕ್

ಅಲ್ಲು ಅರ್ಜುನ್ ಸದ್ಯ ಪುಷ್ಪ 2  ಚಿತ್ರದಲ್ಲಿ ಬ್ಯುಸಿಯಿದ್ದಾರೆ. ಅವರ ಈ ವರ್ಷದ ಬಹುನಿರೀಕ್ಷಿತ ಚಿತ್ರಗಳಲ್ಲಿ ಇದು ಒಂದಾಗಿದ್ದು, ಡಿಸೆಂಬರ್ 6 ರಂದು ಸಿನಿಮಾ ಥಿಯೇಟರ್‌ ಗೆ ಅಪ್ಪಳಿಸಲಿದೆ. ಆದರೆ ಚಿತ್ರ ಬಿಡುಗಡೆಗೆ ಮುನ್ನವೇ  ಪುಷ್ಪ 2  ಚಿತ್ರದ ಕ್ಲೈಮ್ಯಾಕ್ಸ್ ದೃಶ್ಯ  ಸೆಟ್‌ನಿಂದ ಲೀಕ್ ಆಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗುತ್ತಿದೆ.

ಪುಷ್ಪ 2 ಸಿನಿಮಾ, ಆಗಸ್ಟ್‌ನಲ್ಲಿ ಬಿಡುಗಡೆ ಆಗ್ಬೇಕಿತ್ತು.  ಆದರೆ ನಿರ್ಮಾಣ ಕಾರ್ಯಗಳು ಪೂರ್ಣಗೊಳ್ಳದ ಕಾರಣ  ಚಿತ್ರ ಬಿಡುಗಡೆಯನ್ನು ಮುಂದೂಡಲಾಗಿದೆ. ಇದೀಗ ಬಿಡುಗಡೆಗೂ ಮುನ್ನವೇ  ಪುಷ್ಪ 2 ಚಿತ್ರದ ಕ್ಲೈಮ್ಯಾಕ್ಸ್ ದೃಶ್ಯ ಲೀಕ್ ಆಗಿದೆ.

ವೈರಲ್‌ ವಿಡಿಯೋದಲ್ಲಿ ಚಿತ್ರದ ಶೂಟಿಂಗ್ ನಡೆಯುತ್ತಿದೆ. ಆದ್ರೆ ಅದು ಯಾವ ಚಿತ್ರದ್ದು ಎನ್ನುವುದು ಸ್ಪಷ್ಟವಾಗಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಅದನ್ನು ಪುಷ್ಪ 2 ಚಿತ್ರದ ಕ್ಲೈಮ್ಯಾಕ್ಸ್ ದೃಶ್ಯ ಎಂದು ಬರೆಯಲಾಗಿದೆ.

ಮಾಧ್ಯಮ ವರದಿಗಳ ಪ್ರಕಾರ, 500 ಕೋಟಿ ಬಜೆಟ್‌ನಲ್ಲಿ  ಪುಷ್ಪ 2 : ದಿ ರೂಲ್ ಸಿದ್ಧವಾಗಿದೆ. ಈ ಚಿತ್ರದಲ್ಲಿ ಅಲ್ಲು ಅರ್ಜುನ್ ಜೊತೆ ರಶ್ಮಿಕಾ ಮಂದಣ್ಣ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈಗಾಗಲೇ ಚಿತ್ರದ ಟೀಸರ್ ಹಾಗೂ ಹಾಡುಗಳು ಬಿಡುಗಡೆಯಾಗಿದ್ದು, ಪುಷ್ಪ 2 ಚಿತ್ರದ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read