HomeIndiaBREAKING: ಅಲ್ಲು ಅರ್ಜುನ್ ಬಂಧನಕ್ಕೆ ನಟಿ ರಶ್ಮಿಕಾ ಮಂದಣ್ಣ ಅಸಮಾಧಾನ

BREAKING: ಅಲ್ಲು ಅರ್ಜುನ್ ಬಂಧನಕ್ಕೆ ನಟಿ ರಶ್ಮಿಕಾ ಮಂದಣ್ಣ ಅಸಮಾಧಾನ

ಹೈದರಾಬಾದ್: ನಟ ಅಲ್ಲು ಅರ್ಜುನ್ ಬಂಧನಕ್ಕೆ ನಟಿ ರಶ್ಮಿಕಾ ಮಂದಣ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲು ಅರ್ಜುನ್ ಬಂಧನ ಮಾಡಿದ್ದನ್ನು ನಂಬಲು ಸಾಧ್ಯವಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಥಿಯೇಟರ್ ನಲ್ಲಿ ಸಂಭವಿಸಿದ್ದ ಕಾಲ್ತುಳಿತ ಘಟನೆಯಲ್ಲಿ ಮಹಿಳೆ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅವರನ್ನು ಬಂಧಿಸಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೊಳಗಾಗಿದ್ದ ಅವರಿಗೆ ತೆಲಂಗಾಣ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ನಾಂಪಲ್ಲಿ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದ್ದ ಕೆಲವೇ ಗಂಟೆಗಳಲ್ಲಿ ಅಲ್ಲು ಅರ್ಜುನ್ ಗೆ ಹೈಕೋರ್ಟ್ ನಿಂದ ಜಾಮೀನು ಮಂಜೂರಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಲ್ಲು ಅರ್ಜುನ್ ಬಂಧನ ಬಗ್ಗೆ ಪ್ರತಿಕ್ರಿಯೆ ನೀಡಿದ ರಶ್ಮಿಕಾ ಮಂದಣ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲು ಅರ್ಜುನ್ ಬಂಧನ ಮಾಡಿದ್ದು ನಂಬಲು ಸಾಧ್ಯವಿಲ್ಲ. ಅಭಿಮಾನಿ ಸಾವಿಗೆ ಅಲ್ಲು ಅರ್ಜುನ್ ಹೇಗೆ ಹೊಣೆಯಾಗುತ್ತಾರೆ ಎಂದು ಪ್ರಶ್ನಿಸಿದ್ದಾರೆ.

ನಾನು ಈಗ ನೋಡುತ್ತಿರುವುದನ್ನು ನಂಬಲು ಸಾಧ್ಯವಾಗುತ್ತಿಲ್ಲ..ನಡೆದ ಘಟನೆ ದುರದೃಷ್ಟಕರ ಮತ್ತು ಅತ್ಯಂತ ದುಃಖಕರ ಘಟನೆಯಾಗಿದೆ. ಆದರೆ, ಎಲ್ಲದಕ್ಕೂ ಒಬ್ಬನೇ ಒಬ್ಬ ವ್ಯಕ್ತಿಯ ಮೇಲೆ ಆರೋಪ ಹೊರಿಸುವುದನ್ನು ನೋಡಿದರೆ ಬೇಸರವಾಗುತ್ತದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular