ನಾಳೆ ಬರಲಿದೆ ಅಲ್ಲು ಅರ್ಜುನ್ ಅಭಿನಯದ ‘ಪುಷ್ಪ 2’ ಟೀಸರ್

ನಾಳೆ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಹುಟ್ಟು ಹಬ್ಬದ ಪ್ರಯುಕ್ತ ಅವರ ಬಹು ನಿರೀಕ್ಷಿತ ‘ಪುಷ್ಪ 2’ ಚಿತ್ರದ ಟೀಸರ್ ನಾಳೆ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಲಿದ್ದು, ಅವರ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. 2021ರಲ್ಲಿ ತೆರೆಕಂಡಿದ್ದ ‘ಪುಷ್ಪ’ ಚಿತ್ರ ಸೂಪರ್ ಡೂಪರ್ ಹಿಟ್ ಆಗುವ ಮೂಲಕ ಬಾಕ್ಸಾಫೀಸ್ ನಲ್ಲಿ ಒಳ್ಳೆಯ ಗಳಿಕೆ ಮಾಡಿತ್ತು, ಇದೀಗ ಅಲ್ಲು ಅರ್ಜುನ್ ಅವರನ್ನು ಮತ್ತೊಮ್ಮೆ ತೆರೆ ಮೇಲೆ ವೀಕ್ಷಿಸಲು ಪ್ರೇಕ್ಷಕರು ಸಜ್ಜಾಗಿದ್ದಾರೆ.

ಈ ಚಿತ್ರದಲ್ಲಿ ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಪ್ರಮುಖ ಪಾತ್ರದಲ್ಲಿದ್ದು, ವಿಜಯ್ ಸೇತುಪತಿ, ಫಹಾದ್ ಫಾಝಿಲ್, ಪ್ರಿಯಾಮಣಿ, ಅನಸೂಯ ಭಾರದ್ವಾಜ್, ಶ್ರೀ ತೇಜ್, ಜಗದೀಶ್ ಪ್ರತಾಪ್, ಜಗಪತಿ ಬಾಬು, ಪ್ರಕಾಶ್ ರಾಜ್, ಸುನಿಲ್, ರಾವ್ ರಮೇಶ್,  ಮತ್ತು ಅಜಯ್  ತಾರಾ ಬಳಗದಲ್ಲಿದ್ದಾರೆ. ಮೈತ್ರಿ ಮೂವಿ ಮೇಕರ್ಸ್ ಬ್ಯಾನರ್ ನಲ್ಲಿ ನಿರ್ಮಾಣ ಮಾಡಲಾಗಿದ್ದು,  ದೇವಿ ಶ್ರೀ ಪ್ರಸಾದ್ ಸಂಗೀತ ಸಂಯೋಜನೆ ನೀಡಿದ್ದಾರೆ. ಅಗಸ್ಟ್ 15ಕ್ಕೆ ಈ ಸಿನಿಮಾ ತೆಲುಗು ಸೇರಿದಂತೆ ಕನ್ನಡ, ತಮಿಳು, ಮಲಯಾಳಂ, ಮತ್ತು ಹಿಂದಿ ಭಾಷೆಯಲ್ಲಿ ತೆರೆ ಕಾಣಲಿದೆ.

https://twitter.com/MythriOfficial/status/1775109733646782496

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read