BREAKING: ಹಿರಿಯ IPS ಅಧಿಕಾರಿ ಅಲೋಕ್ ಕುಮಾರ್ ಗೆ ಬಿಗ್ ರಿಲೀಫ್: ಸರ್ಕಾರದ ಇಲಾಖಾ ತನಿಖಾ ಆದೇಶ ರದ್ದುಗೊಳಿಸಿದ CAT

ನವದೆಹಲಿ: ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ವಿರುದ್ಧ ಇಲಾಖಾ ತನಿಖೆಗೆ ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ರದ್ದುಗೊಳಿಸಿ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (CAT) ಆದೇಶ ಹೊರಡಿಸಿದೆ. ಈ ಮೂಲಕ ಅಲೋಕ್ ಕುಮಾರ್ ಗೆ ಬಿಗ್ ರಿಲೀಫ್ ಸಿಕ್ಕಿದೆ.

ಸರ್ಕಾರದ ಇಲಾಖಾ ತನಿಖೆ ಆದೇಶ ಪ್ರಶ್ನಿಸಿ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಸಿಎಟಿ ಮೊರೆ ಹೋಗಿದ್ದರು. ವಿಚಾರಣೆ ವೇಳೆ ಇಬ್ಬರು ನ್ಯಾಯಮೂರ್ತಿಗಳಿಂದ ವಿಭಿನ್ನ ತೀರ್ಪು ಬಂದಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣ ಸಿಎಟಿ ಮುಖ್ಯಸ್ಥ ನ್ಯಾಯಮೂರ್ತಿ ರಣಜಿತ್ ಬಳಿ ಹೋಗಿತ್ತು. ಎರಡೂ ಕಡೆಯ ವಾದ-ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ರಣಜಿತ್ ಇಂದು ತೀರ್ಪು ಪ್ರಕಟಿಸಿದ್ದಾರೆ.

ಅಲೋಕ್ ಕುಮಾರ್ ವಿರುದ್ಧ ಸರ್ಕಾರದ ಇಲಾಖಾ ತನಿಖೆ ಆದೇಶ ರದ್ದುಗೊಳಿಸಿದ್ದು, ಅಲೋಕ್ ಕುಮಾರ್ ಅವರಿಗೆ ಸಲ್ಲಬೇಕಾದ ಬಡ್ತಿ ಸವಲತ್ತು ನೀಡುವಂತೆ ಆದೇಶ ಹೊರಡಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read