ಬೆಲ್ಲ ಮತ್ತು ಸಕ್ಕರೆಯಲ್ಲಿ ತೂಕ ಇಳಿಸಿಕೊಳ್ಳಲು ಯಾವುದು ಸಹಕಾರಿ…..?

ಸಕ್ಕರೆ ಮತ್ತು ಬೆಲ್ಲ ಎರಡನ್ನು ಕಬ್ಬಿನ ರಸದಿಂದ ತಯಾರಿಸಲಾಗುತ್ತದೆ. ಸಕ್ಕರೆಗೆ ಹೋಲಿಸಿದರೆ ಬೆಲ್ಲ ಆರೋಗ್ಯಕ್ಕೆ ಉತ್ತಮವೆಂದು ಹೇಳಲಾಗುತ್ತದೆ. ಯಾಕೆಂದರೆ ಬೆಲ್ಲದಲ್ಲಿರುವ ಅಂಶವನ್ನು ಸಕ್ಕರೆ ತಯಾರಿಕೆಯಲ್ಲಿ ಉಪ ಉತ್ಪನ್ನವಾಗಿ ಬಳಸಲಾಗುತ್ತದೆ.

ಬೆಲ್ಲದಲ್ಲಿ ಪ್ರೋಟೀನ್, ಕೊಬ್ಬು, ಕಬ್ಬಿಣ, ಮೆಗ್ನೀಶಿಯಂ, ಪೊಟ್ಯಾಶಿಯಂ, ಮತ್ತು ಮ್ಯಾಂಗನೀಸ್ ಅಂಶವಿದೆ. ಇದು ಬಿ ಜೀವಸತ್ವಗಳು ಮತ್ತು ಖನಿಜಗಳನ್ನು ಸಹ ಹೊಂದಿರುತ್ತದೆ. ಸಕ್ಕರೆಗೆ ಹೋಲಿಸಿದರೆ ಬೆಲ್ಲ ಹೆಚ್ಚು ಪೌಷ್ಟಿಕಾಂಶವನ್ನು ಮಾತ್ರವಲ್ಲ ಕ್ಯಾಲೋರಿಗಳನ್ನೂ ಕಡಿಮೆ ಮಾಡುತ್ತದೆ. ಪೊಟ್ಯಾಶಿಯಂ ಉತ್ತಮ ಮೂಲವಾಗಿರುವ ಬೆಲ್ಲವು ನಿಮ್ಮ ಚಯಾಪಚಯ ಕ್ರಿಯೆಯನ್ನು ಪುನರುಜ್ಜೀವನಗೊಳಿಸುತ್ತದೆ. ಅದು ನಿಮ್ಮ ತೂಕ ನಷ್ಟವನ್ನು ವೇಗಗೊಳಿಸುತ್ತದೆ.

ಆದರೆ ಸಕ್ಕರೆಯನ್ನು ಸಂಸ್ಕರಿಸಲಾಗುತ್ತದೆ. ಇದರಿಂದಾಗಿ ಅದರ ಪೌಷ್ಟಿಕಾಂಶದ ಮೌಲ್ಯವನ್ನು ಕಳೆದುಕೊಳ್ಳುತ್ತದೆ. ಆದರೆ ಬೆಲ್ಲ ಕುದಿಯುವ ಪ್ರಕ್ರಿಯೆಗೆ ಮಾತ್ರ ಒಳಗಾಗುತ್ತದೆ. ಹಾಗಾಗಿ ಸಕ್ಕರೆ ಎಲ್ಲಾ ಪೋಷಕಾಂಶಗಳನ್ನು ಸಂಪೂರ್ಣವಾಗಿ ಕಳೆದುಕೊಳ್ಳುತ್ತದೆ. ಆದಕಾರಣ ಸಕ್ಕರೆಗಿಂತ ಬೆಲ್ಲ ಆರೋಗ್ಯಕಾರಿ ಮತ್ತು ತೂಕ ಇಳಿಸಲು ಸಹಕಾರಿ ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read