ಹಾಸನ: ಮೈಸೂರು ಜಿಲ್ಲೆಯ ಸರಗೂರು ತಾಲೂಕು ಕಚೇರಿಗೆ ಬಂಬ್ ಬೆದರಿಕೆ ಬೆನ್ನಲ್ಲೇ ಆಲೂರು ತಾಲೂಕು ಕಚೇರಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ.
ಹಾಸನ ಜಿಲ್ಲೆಯ ಆಲೂರು ತಾಲೂಕು ಕಚೇರಿಗೆ ದುಷ್ಕರ್ಮಿಗಳು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ರವಾನಿಸಿದ್ದಾರೆ. ತಾಲೂಕು ಕಚೇರಿಯಲ್ಲಿ ಬಾಂಬ್ ಇಡಲಾಗಿದೆ ಎಂದು ಬೆದರಿಕೆ ಸಂದೇಶ ರವಾನಿಸಿದ್ದಾರೆ.
ತಾಲೂಕು ಕಚೇರಿ ಸಿಬ್ಬಂದಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು, ಬಾಂಬ್ ಪತ್ತೆದಳ, ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳದಿಂದ ಪರಿಶೀಲನೆ ನಡೆಸಿದ್ದಾರೆ. ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಇದೊಂದು ಹುಸಿಬಾಂಬ್ ಕರೆ ಎಂದು ಪೊಲೀಸರು ದೃಢಪಡಿಸಿದ್ದಾರೆ.

