ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಂಗ ಸಂಸ್ಥೆಯಾಗಿರುವ ಆಳ್ವಾಸ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಅಂಡ್ ರಿಸರ್ಚ್ ಸೆಂಟರ್ ಗೆ ತುಳು ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಯ ಕೋಟಾದಡಿ ಅನುಮೋದನೆ ದೊರೆತಿದೆ.
2026 -27ನೇ ಶೈಕ್ಷಣಿಕ ವರ್ಷಕ್ಕೆ ಒಟ್ಟು 150 ಎಂಬ ಸೀಟುಗಳಿಗೆ ಮಂಜೂರಾತಿ ದೊರೆತಿದೆ. ಇವುಗಳಲ್ಲಿ 54 ಸೀಟುಗಳು ತುಳು ಭಾಷಿಕ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಲಭ್ಯವಿವೆ. ತುಳು ಸಮುದಾಯದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣದಲ್ಲಿ ಹೆಚ್ಚಿನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಈ ಕ್ರಮ ಮಹತ್ವ ಪಡೆದುಕೊಂಡಿದೆ.
ವಿಶೇಷವಾಗಿ ಕರಾವಳಿ ಕರ್ನಾಟಕದ ತುಳು ಭಾಷಿಕ ವೈದ್ಯಕೀಯ ಶಿಕ್ಷಣದ ಆಕಾಂಕ್ಷಿಗಳಿಗೆ ತಮ್ಮದೇ ನೆಲದಲ್ಲಿ ವೈದ್ಯಕೀಯ ಶಿಕ್ಷಣ ಪಡೆದುಕೊಳ್ಳಲು ಇದರಿಂದ ಹೆಚ್ಚಿನ ಅನುಕೂಲವಾಗಲಿದೆ ಎಂದು ಹೇಳಲಾಗಿದೆ.

