ಫೈವ್ ಸ್ಟಾರ್ ಹೋಟೆಲ್ ನಲ್ಲಿ ಮಾತನಾಡಲು ನಾನೇನು ವಿಜಯೇಂದ್ರನಾ ? ಯತ್ನಾಳ್ ವ್ಯಂಗ್ಯ

ಯತ್ನಾಳ್ ಬಂಡಾಯದ ಹಿಂದೆ ಬಿಜೆಪಿ ಮುಖಂಡರ ನೆರಳು! (ಸುದ್ದಿ ವಿಶ್ಲೇಷಣೆ)- Kannada Prabha

ಯಡಿಯೂರಪ್ಪ ಮತ್ತವರ ಕುಟುಂಬದ ವಿರುದ್ಧ ಸಮಯ ಸಂದರ್ಭ ಸಿಕ್ಕಾಗಲೆಲ್ಲಾ ವಾಗ್ದಾಳಿ ನಡೆಸುತ್ತಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಇದನ್ನು ಮತ್ತೆ ಮುಂದುವರಿಸಿದ್ದಾರೆ.

ಶುಕ್ರವಾರದಂದು ನವದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯತ್ನಾಳ್ ಕೆಲವು ದಿನದಿಂದ ಮೌನವಾಗಿದ್ದಾರೆ ಎಂದು ಕೆಲವರು ಹೇಳುತ್ತಿದ್ದಾರೆ. ಪ್ರತಿದಿನ ಮಾತನಾಡಿದರೆ ಹುಚ್ಚ ಅಂತಾರೆ ಎಂದರಲ್ಲದೆ, ನಾನು ಹಾದಿಬೀದಿಯಲ್ಲಿ ಇರುವವನು, ಹಾಗಾಗಿ ಅಲ್ಲಿಯೇ ಮಾತನಾಡುತ್ತೇನೆ. ಫೈವ್ ಸ್ಟಾರ್ ಹೋಟೆಲ್ ನಲ್ಲಿ ಕುಳಿತು ಮಾತನಾಡಲು ನಾನೇನು ವಿಜಯೇಂದ್ರನಾ ಎಂದು ವ್ಯಂಗ್ಯವಾಡಿದ್ದಾರೆ.

ಇನ್ನು ಬಿಜೆಪಿ ವರಿಷ್ಠರ ಜೊತೆಗಿನ ಭೇಟಿ ಕುರಿತಂತೆ ಪ್ರತಿಕ್ರಿಯಿಸಿದ ಅವರು, ನಾನು ಕರ್ನಾಟಕ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿ ಮಾಡುವುದಿಲ್ಲ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಗೃಹ ಸಚಿವ ಅಮಿತ್ ಷಾ ಅವರುಗಳನ್ನು ಭೇಟಿ ಮಾಡುತ್ತೇನೆ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read