Amaranath Yatra : ಅಮರನಾಥ ಯಾತ್ರೆ ಕೈಗೊಂಡಿದ್ದ 300 ಕನ್ನಡಿಗರು ಸುರಕ್ಷಿತ : ಸಚಿವ ಹೆಚ್.ಕೆ ಪಾಟೀಲ್

ಗದಗ : ಅಮರನಾಥ ಯಾತ್ರೆಗೆ ತೆರಳಿದ್ದ 300 ಯಾತ್ರಿಗಳು ಸುರಕ್ಷಿತವಾಗಿದ್ದಾರೆ ಎಂದು ಸಚಿವ ಹೆಚ್ ಕೆ ಪಾಟೀಲ್ ಹೇಳಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು ಯಾತ್ರೆಗೆ ತೆರಳಿದ್ದ ಗದಗ ಜಿಲ್ಲೆಯ 23 ಜನರು ಸಿಲುಕಿದ್ದಾರೆ. ಹಿರಿಯ ಅಧಿಕಾರಿಗಳ ತಂಡ ರಚಿಸಿ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದರು. ಅಮರನಾಥ ಯಾತ್ರೆಯಲ್ಲಿ ಕರ್ನಾಟಕದ 300 ಜನರು ಸಂಕಷ್ಟಕ್ಕೆ ಸಿಲುಕಿದ್ದು, ರಕ್ಷಣಾ ಕಾರ್ಯ ಮುಂದುವರೆದಿದ್ದು ಯಾವುದೇ ರೀತಿಯ ಭಯ ಪಡುವ ಅಗತ್ಯವಿಲ್ಲ ಎಂದು ಸಚಿವ ಎಚ್. ಕೆ ಪಾಟೀಲ್ ತಿಳಿಸಿದರು. ಎಲ್ಲ ಕನ್ನಡಿಗರ ರಕ್ಷಣೆಗೆ ಸೂಕ್ತವಾದ ಕ್ರಮ ಕೈಗೊಳ್ಳಲಾಗಿದೆ. ಯಾತ್ರಾರ್ಥಿಗಳಿಗೆ ಯಾವುದೇ ರೀತಿಯ ತೊಂದರಯಾಗದಂತೆ ಎಲ್ಲ ರೀತಿಯ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಅಮರನಾಥ ಯಾತ್ರೆಗೆ ತೆರಳಿ ಸಂಕಷ್ಟದಲ್ಲಿರುವ ಕನ್ನಡಿಗರ ರಕ್ಷಣೆಗೆ ನಾವು ಬದ್ದ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.ಅಮರನಾಥ ಯಾತ್ರೆಯಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಸಂಪರ್ಕಕ್ಕೆ ಸಿಕ್ಕ ಯಾತ್ರಾರ್ಥಿಗಳು ಸುರಕ್ಷಿತವಾಗಿದ್ದಾರೆ. ಸಂತ್ರಸ್ತರ ರಕ್ಷಣೆ ಹಾಗೂ ರಾಜ್ಯಕ್ಕೆ ಕರೆ ತರುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ.ಭಾರಿ ಮಳೆಯಿಂದಾಗಿ ಮಾರ್ಗಮಧ್ಯೆ ಗುಡ್ಡ ಕುಸಿತವಾಗಿದೆ. ಬೇಸ್ ಕ್ಯಾಂಪ್ ನಲ್ಲಿ ಆಶ್ರಯ ಪಡೆದು ಯಾತ್ರೆಗಳು ಸುರಕ್ಷಿತವಾಗಿದ್ದಾರೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read