HomeLatest Newsಜುಲೈ 3ರಿಂದ ಅಮರನಾಥ ಯಾತ್ರೆ: ಭದ್ರತೆ ಹೆಚ್ಚಿಸಿದ ಜಮ್ಮು-ಕಾಶ್ಮೀರ ಸರ್ಕಾರ

ಜುಲೈ 3ರಿಂದ ಅಮರನಾಥ ಯಾತ್ರೆ: ಭದ್ರತೆ ಹೆಚ್ಚಿಸಿದ ಜಮ್ಮು-ಕಾಶ್ಮೀರ ಸರ್ಕಾರ

ಶ್ರೀನಗರ: ಅಮರನಾಥ ಯಾತ್ರೆಗೆ ಕ್ಷಣಗಣನೆ ಆರಂಭವಾಗಿದೆ. ಜುಲೈ 3ರಂದು ಅಮರನಾಥ ಯಾತ್ರೆ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರ ಸರ್ಕಾರ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಂಡಿದೆ.

ಪಹಲ್ಗಾಮ್ ನಲ್ಲಿ ಉಗ್ರರ ದಾಳಿ ಬಳಿಕ ಯತ್ರಾರ್ಥಿಗಳ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಜಮ್ಮುವಿನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಮಾರ್ಗಗಳಲ್ಲಿ ಹೆಚ್ಚುವರಿ ಚೆಕ್ ಪೋಸ್ಟ್ ಗಳನ್ನು ನಿರ್ಮಿಸಿ ಪೊಲೀಸರನ್ನು, ಅರೆಸೇನಾ ಸಿಬಂದಿಗಳನ್ನು ನಿಯೋಜಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಷ್ಟ್ರೀಯ ಹೆದ್ದಾರಿಗಳು, ಮೂಲ ಶಿಬಿರ ಭಗವತಿ ನಗರಕ್ಕೆ ಹೋಗುವ ಮಾರ್ಗಗಳು ಸೇರಿದಂತೆ ಸೂಕ್ಷ್ಮ ಪ್ರದೇಶಗಳಲ್ಲಿ ಚೆಕ್ ಪೋಸ್ಟ್ ಗಳನ್ನು ತೆರೆಯಲಾಗಿದೆ. ಸಿಆರ್ ಪಿ ಎಫ್ ಸಿಬ್ಬಂದಿ ಹಾಗೂ ಕೆ-9 ಶ್ವಾನದಳಗಳನ್ನು ನಿಯೋಜಿಸಲಾಗಿದೆ. ದಿನದ 24 ಗಂಟೆಗಳ ಕಾಲ ತೀವ್ರ ನಿಗಾ ವಹಿಸಲಾಗುತ್ತಿದೆ. ಹೋಟೆಲ್, ಗೆಸ್ಟ್ ಹೌಸ್ ಗಳ ಮೇಲೂ ಹದ್ದಿನಕಣ್ಣಿಡಲಾಗಿದೆ.

ಇನ್ನು ಅಮರನಾಥ ಯಾತ್ರೆಗೆ 50 ಸಾವಿರ ಯಾತ್ರಾರ್ಥಿಗಳಿಗೆ ವಸತಿ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ಜಮ್ಮು-ಕಾಶ್ಮೀರ ಆಡಳಿತ ಮಂಡಳಿ ತಿಳಿಸುದೆ. ಜುಲೈ 2ರಿಂದ ಭಗವತಿ ನಗರದಿಂದ ಯಾತ್ರೆ ಆರಂಭವಾಗಲಿದೆ ಎಂದು ಆಯುಕ್ತ ರಮೇಶ್ ಕುಮಾರ್ ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular