HomeLive Newsಅಮರನಾಥ ಯಾತ್ರಿಕರಿಗೆ 5 ಸಂಕಲ್ಪದ ಬಗ್ಗೆ ತಿಳಿಸಿ ಪತ್ರ ಬರೆದ ಪ್ರಧಾನಿ ಮೋದಿ

ಅಮರನಾಥ ಯಾತ್ರಿಕರಿಗೆ 5 ಸಂಕಲ್ಪದ ಬಗ್ಗೆ ತಿಳಿಸಿ ಪತ್ರ ಬರೆದ ಪ್ರಧಾನಿ ಮೋದಿ

ನವದೆಹಲಿ: ಹಿಂದೂಗಳ ಪವಿತ್ರ ಧಾರ್ಮಿಕ ಕ್ಷೇತ್ರ ಅಮರನಾಥ ಯಾತ್ರೆ ಇಂದಿನಿಂದ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದಾದ್ಯಂತ ಶಿವಭಕ್ತರಿಗೆ ವಿಶೇಷ ಪತ್ರ ಬರೆದು ಶುಭಾಶಯ ಕೋರಿದ್ದಾರೆ.

ಭಗವಾನ್ ಅಮರನಾಥರ ಕೃಪೆಯಿಂದ ಪ್ರತಿಯೊಬ್ಬ ಯಾತ್ರಿಕರ ಪಯಣ ಸುರಕ್ಷಿತ, ಸುಖಕರ ಹಾಗೂ ಮಂಗಳಕರವಾಗಿರಲಿ ಎಂದು ಪ್ರಧಾನಿ ಮೋದಿ ಹಾರೈಸಿದ್ದಾರೆ.

ಅಮರನಾಥ ಯಾತ್ರೆ ಕೇವಲ ಧಾರ್ಮಿಕ ಪ್ರವಾಸವಲ್ಲ, ಅದು ಭಕ್ತಿ. ಆತ್ಮಸಾಕ್ಷಾತ್ಕಾರ ಹಾಗೂ ರಾಷ್ಟ್ರೀಯ ಏಕತೆಯ ಸಂಕೇತವಾಗಿದೆ ಎಂದು ಪ್ರಧಾನಿ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ. ಯಾತ್ರೆಯ ಯಶಸ್ವಿ ಆಯೋಜನೆಗಾಗಿ ಶ್ರಮಿಸುತ್ತಿರುವ ಭದ್ರತಾ ಪಡೆಗಳು, ಆಡಳಿತ ಸಿಬ್ಬಂದಿ, ಆರೋಗ್ಯ ಕಾರ್ಯಕರ್ತರು ಹಾಗೂ ಸ್ವಯಂಸೇವಕರ ಸೇವೆಯನ್ನು ಅವರು ಶ್ಲಾಘಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ಸಮಯದಲ್ಲಿ ಯಾತ್ರಿಕರು ಐದು ಸಂಕಲ್ಪಗಳನ್ನು ಪಾಲಿಸುವಂತೆ ಮನವಿ ಮಾಡಿದ್ದಾರೆ. ಮೊದಲನೆಯದಾಗಿ, ಯಾತ್ರಾ ಮಾರ್ಗದಲ್ಲಿ ಸ್ವಚ್ಛತೆ ಕಾಪಾಡಿ ಪರಿಸರವನ್ನು ಶುಚಿಯಾಗಿಡಬೇಕು. ಎರಡನೆಯದಾಗಿ, ಆಡಳಿತ ಹಾಗೂ ಭದ್ರತಾ ಪಡೆಗಳ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಸುರಕ್ಷಿತವಾಗಿ ಯಾತ್ರೆ ಕೈಗೊಳ್ಳಬೇಕು. ಮೂರನೆಯದಾಗಿ, ‘ವೋಕಲ್ ಫಾರ್ ಲೋಕಲ್’ ಪರಿಕಲ್ಪನೆಯಡಿ ಯಾತ್ರೆಯ ವೆಚ್ಚದ ಕನಿಷ್ಠ ಶೇ.10ರಷ್ಟು ಮೊತ್ತವನ್ನು ಜಮ್ಮು-ಕಾಶ್ಮೀರದ ಸ್ಥಳೀಯ ಉತ್ಪನ್ನಗಳ ಖರೀದಿಗೆ ಮೀಸಲಿಟ್ಟು ಅಲ್ಲಿನ ಜನರ ಜೀವನೋಪಾಯಕ್ಕೆ ಬೆಂಬಲ ನೀಡಬೇಕು.

ನಾಲ್ಕನೆಯದಾಗಿ, ‘ಏಕ್ ಪೇಡ್ ಮಾಂ ಕೆ ನಾಮ್’ ಅಭಿಯಾನದಡಿ ಯಾತ್ರೆಯ ಬಳಿಕ ಒಂದು ಸಸಿ ನೆಟ್ಟು ಪರಿಸರ ಸಂರಕ್ಷಣೆಗೆ ಕೊಡುಗೆ ನೀಡಬೇಕು. ಐದನೆಯದಾಗಿ, ‘ನೇಷನ್ ಫಸ್ಟ್’ ಸಂಕಲ್ಪದೊಂದಿಗೆ ದೇಶದ ಅಭಿವೃದ್ಧಿಗೆ ಪ್ರತಿಯೊಬ್ಬರೂ ತಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸಿ ವಿಕಸಿತ ಭಾರತದ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಕರೆ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular