?> ಅಮರನಾಥ ಯಾತ್ರೆ ಮುಗಿಸಿ ವಾಪಸ್ ಆಗುತ್ತಿದ್ದಾಗ ದುರಂತ; ಕಾಲು ಜಾರಿ 300 ಅಡಿ ಆಳಕ್ಕೆ ಬಿದ್ದ ಯಾತ್ರಾರ್ಥಿ ದುರ್ಮರಣ - KannadaDunia.com

ಅಮರನಾಥ ಯಾತ್ರೆ ಮುಗಿಸಿ ವಾಪಸ್ ಆಗುತ್ತಿದ್ದಾಗ ದುರಂತ; ಕಾಲು ಜಾರಿ 300 ಅಡಿ ಆಳಕ್ಕೆ ಬಿದ್ದ ಯಾತ್ರಾರ್ಥಿ ದುರ್ಮರಣ

ಶ್ರೀನಗರ: ಅಮರನಾಥ ಯಾತ್ರೆ ಮುಗಿಸಿ ದೇವರ ದರ್ಶನ ಪಡೆದು ವಾಪಸ್ ಆಗುತ್ತಿದ್ದಾಗ ದುರಂತವೊಂದು ಸಂಭವಿಸಿದ್ದು, ಯಾತ್ರಾರ್ಥಿಯೊಬ್ಬರು ಕಾಲು ಜಾರಿ 300 ಅಡಿ ಆಳಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ.

ಅಮರನಾಥ ದರ್ಶನ ಮುಗಿಸಿ ವಾಪಸ್ ಆಗುತ್ತಿದ್ದ ವೇಳೆ ಜಮ್ಮು-ಕಾಶ್ಮೀರದ ಕಾಳಿಮಾತೆಯ ಮಂದಿರ ಬಳಿ ಈ ದುರಂತ ಸಂಭವಿಸಿದೆ. ಮೃತರನ್ನು 50 ವರ್ಷದ ವಿಜಯ್ ಕುಮರ್ ಶಾ ಎಂದು ಗುರುತಿಸಲಾಗಿದೆ.

ಬಿಹಾರದ ರೋಹ್ತಾಸ್ ಜಿಲ್ಲೆಯ ತುಂಬಾ ಗ್ರಾಮದ ನಿವಾಸಿಯಾಗಿದ್ದರು. ಕಾಳಿಮಾತೆ ಮಂದಿರದ ಗುಹೆಯ ಬಳಿ ಕಾಲು ಜಾರಿದ ವಿಜಯ್ ಕುಮಾರ್ ಹಾಗೂ ಇನ್ನಿಬ್ಬರು 300 ಅಡಿ ಆಳಕ್ಕೆ ಬಿದ್ದಿದ್ದಾರೆ. ಈ ವೇಳೆ ರಕ್ಷಣಾ ತಂಡ ತಕ್ಷಣ ಕಾರ್ಯಾಚರಣೆ ನಡೆಸಿ ಇಬ್ಬರನ್ನು ರಕ್ಷಿಸಿದ್ದಾರೆ. ಆದರೆ ವಿಜಯ್ ಕುಮಾರ್ ಅವರನ್ನು ಬದುಕಿಸಲು ಸಾಧ್ಯವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read