HomeIndiaಟ್ರಕ್ - ಟೆಂಪೋ ನಡುವೆ ಡಿಕ್ಕಿ: ಭೀಕರ ಅಪಘಾತದಲ್ಲಿ 7 ಜನ ಸ್ಥಳದಲ್ಲೇ ಸಾವು, 21...

ಟ್ರಕ್ – ಟೆಂಪೋ ನಡುವೆ ಡಿಕ್ಕಿ: ಭೀಕರ ಅಪಘಾತದಲ್ಲಿ 7 ಜನ ಸ್ಥಳದಲ್ಲೇ ಸಾವು, 21 ಮಂದಿಗೆ ಗಾಯ

ಮಹಾರಾಷ್ಟ್ರದ ಅಮರಾವತಿಯಲ್ಲಿ ಟ್ರಕ್ ಮತ್ತು ಟೆಂಪೋ ನಡುವೆ ಡಿಕ್ಕಿಯಾಗಿ 7 ಜನ ಸಾವು ಕಂಡಿದ್ದು, 21 ಮಂದಿ ಗಾಯಗೊಂಡಿದ್ದಾರೆ.

ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ಸಮೃದ್ಧಿ ಹೆದ್ದಾರಿಯಲ್ಲಿ ಗುರುವಾರ ಟ್ರಕ್ ಮತ್ತು ಟೆಂಪೋ ಪಿಕಪ್ ವಾಹನದ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ಕನಿಷ್ಠ ಏಳು ಮಂದಿ ಸಾವನ್ನಪ್ಪಿದ್ದಾರೆ ಮತ್ತು 21 ಮಂದಿ ಗಾಯಗೊಂಡಿದ್ದಾರೆ.

ಬುಲ್ಧಾನಾ ಜಿಲ್ಲೆಯ ಶೆಗಾಂವ್‌ ನಿಂದ ವಾರ್ಧಾಗೆ ದುರ್ಗಾ ದೇವಿಯ ಮೂರ್ತಿಯೊಂದಿಗೆ ತೆರಳುತ್ತಿದ್ದ ಭಕ್ತರನ್ನು ಹೊತ್ತೊಯ್ಯುತ್ತಿದ್ದ ಟೆಂಪೋ ಪಿಕಪ್ ವಾಹನಕ್ಕೆ ಟ್ರಕ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆ ಎಷ್ಟಿತ್ತೆಂದರೆ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಪಘಾತದ ನಂತರ, ಗಾಯಗೊಂಡವರನ್ನು ಚಿಕಿತ್ಸೆಗಾಗಿ ಧಮನ್‌ ಗಾಂವ್ ಗ್ರಾಮೀಣ ಆಸ್ಪತ್ರೆಗೆ ಸಾಗಿಸಲಾಯಿತು. ಪೊಲೀಸರು ಆಗಮಿಸುವ ಮುನ್ನವೇ ಸ್ಥಳಕ್ಕೆ ಧಾವಿಸಿದ ಸ್ಥಳೀಯ ನಿವಾಸಿಗಳು ರಕ್ಷಣಾ ಕಾರ್ಯವನ್ನು ತ್ವರಿತಗೊಳಿಸಲು ಸಹಾಯ ಮಾಡಿದರು.

ಅಪಘಾತದ ಬಗ್ಗೆ ಮಾಹಿತಿ ಪಡೆದ ತಕ್ಷಣ ಧಮನ್‌ ಗಾಂವ್ ರೈಲ್ವೆ ಪೊಲೀಸರು ಸ್ಥಳಕ್ಕೆ ಆಗಮಿಸಿ ರಕ್ಷಣೆ ಮತ್ತು ಪರಿಹಾರ ಕಾರ್ಯಗಳನ್ನು ಕೈಗೊಂಡರು.

ಅಪಘಾತದಲ್ಲಿ 21 ಮಂದಿ ಗಾಯಗೊಂಡಿದ್ದಾರೆ ಎಂದು ಅಮರಾವತಿ ಗ್ರಾಮೀಣ ಪೊಲೀಸ್ ವರಿಷ್ಠಾಧಿಕಾರಿ (SP) ನಿಕೇತನ್ ಕದಮ್ ‘ಇಂಡಿಯಾ ಟುಡೇ’ಗೆ ತಿಳಿಸಿದ್ದಾರೆ. ಗಾಯಗೊಂಡವರಲ್ಲಿ ನಾಲ್ಕರಿಂದ ಐವರು ಗಂಭೀರ ಸ್ಥಿತಿಯಲ್ಲಿದ್ದಾರೆ ಮತ್ತು ಸುಮಾರು 14 ರಿಂದ 15 ಮಂದಿ ಸಣ್ಣಪುಟ್ಟ ಗಾಯಗಳಿಗೆ ಒಳಗಾಗಿದ್ದು, ಪ್ರಸ್ತುತ ಅಪಾಯದಿಂದ ಪಾರಾಗಿದ್ದಾರೆ ಎಂದು ಅವರು ಹೇಳಿದರು.

ಅಪಘಾತದ ಬಗ್ಗೆ ತಿಳಿದ ನಂತರ ಎಸ್‌ಪಿ ನಿಕೇತನ್ ಕದಮ್ ಮತ್ತು ಧಮನ್‌ಗಾಂವ್ ಪುರಸಭೆ ಅಧ್ಯಕ್ಷೆ ಅರ್ಚನಾ ರೋಥೆ ಕೂಡ ಆಸ್ಪತ್ರೆಗೆ ಭೇಟಿ ನೀಡಿ, ಚಿಕಿತ್ಸೆ ಪಡೆಯುತ್ತಿರುವವರ ಸ್ಥಿತಿಗತಿಯನ್ನು ಪರಿಶೀಲಿಸಿದರು.

ಡಿಕ್ಕಿಗೆ ಕಾರಣವಾದ ಸಂದರ್ಭಗಳನ್ನು ತಿಳಿಯಲು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮೃತಪಟ್ಟವರು ಮತ್ತು ಗಾಯಗೊಂಡವರ ಕುರಿತಾದ ಹೆಚ್ಚಿನ ವಿವರಗಳನ್ನು ಕಲೆಹಾಕಲಾಗುತ್ತಿದೆ.

ಉತ್ತರ ಪ್ರದೇಶದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವ ಘಟನೆ: ರಸ್ತೆ ಬದಿಯಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

ಭದೋಹಿ: ಉತ್ತರ ಪ್ರದೇಶದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವ ಘಟನೆ ನಡೆದಿದೆ. ರಸ್ತೆ ಬದಿಯಲ್ಲೇ ಮಗುವಿಗೆ ಮಹಿಳೆ ಜನ್ಮ ನೀಡಿದ್ದಾರೆ.

ಉತ್ತರ ಪ್ರದೇಶದ ಭದೋಹಿ ಜಿಲ್ಲೆಯ ಜ್ಞಾನಪುರದಲ್ಲಿರುವ ಮಹಾರಾಜಾ ಚೇತಸಿಂಗ್ ಜಿಲ್ಲಾ ಆಸ್ಪತ್ರೆಯ ಹೊರಭಾಗದಲ್ಲಿ 20 ವರ್ಷದ ಗರ್ಭಿಣಿಯೊಬ್ಬರು ರಸ್ತೆ ಬದಿಯಲ್ಲೇ ಮಗುವಿಗೆ ಜನ್ಮ ನೀಡಿದ ಘಟನೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಸೆ.29ರ ರಾತ್ರಿ ಪ್ರಸವ ವೇದನೆಯಿಂದ ಆಸ್ಪತ್ರೆಗೆ ಬಂದಿದ್ದ ರಾಣಿ ದೇವಿ ಅವರನ್ನು ದಾಖಲಿಸಿಕೊಳ್ಳಲಿಲ್ಲ ಎಂಬ ಕುಟುಂಬದ ಆರೋಪ ಕೇಳಿಬಂದಿದ್ದು, ಬಳಿಕ ಆಸ್ಪತ್ರೆಯ ಗೇಟ್‌ ಸಮೀಪವೇ ಹೆರಿಗೆಯಾಗಿದೆ.

ರಾಣಿ ದೇವಿ ಜೋರೈ ಗ್ರಾಮದ ನಿವಾಸಿಯಾಗಿದ್ದು, ಪ್ರಸವ ವೇದನೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕುಟುಂಬದವರೊಂದಿಗೆ ಸರ್ಕಾರಿ ಆಸ್ಪತ್ರೆ ತಲುಪಿದ್ದರು. ಕುಟುಂಬದವರ ಪ್ರಕಾರ, ಆಸ್ಪತ್ರೆಯಲ್ಲಿ ಅವರನ್ನು ದಾಖಲಿಸಿಕೊಳ್ಳದೆ ವಾಪಸ್ ಕಳುಹಿಸಲಾಯಿತು. ಆಸ್ಪತ್ರೆಯಿಂದ ಹೊರಗೆ ಬರುತ್ತಿದ್ದ ವೇಳೆ ಪ್ರಸವ ವೇದನೆ ತೀವ್ರಗೊಂಡಿದ್ದು, ರಸ್ತೆ ಬದಿಯಲ್ಲೇ ಹೆರಿಗೆ ನಡೆದಿದೆ. ಸುತ್ತಮುತ್ತಲಿದ್ದ ಮಹಿಳೆಯರು ಚಾದರದ ಆವರಣ ಕಲ್ಪಿಸಿ ಹೆರಿಗೆಗೆ ನೆರವಾಗಿದ್ದಾರೆ.

ರಕ್ತದ ಪ್ರಮಾಣ ಕೇವಲ 5 ಗ್ರಾಂ: ಆಸ್ಪತ್ರೆ ಅಧಿಕಾರಿಗಳ ಸ್ಪಷ್ಟನೆ

ಘಟನೆಗೆ ಸಂಬಂಧಿಸಿದಂತೆ ಆಸ್ಪತ್ರೆ ಆಡಳಿತ ವಿಭಿನ್ನ ಕಾರಣವನ್ನು ನೀಡಿದೆ. ರಾಣಿ ದೇವಿಯ ಹಿಮೋಗ್ಲೋಬಿನ್ ಮಟ್ಟ ಕೇವಲ 5 ಗ್ರಾಂ ಇದ್ದುದರಿಂದ ಹೆಚ್ಚಿನ ಚಿಕಿತ್ಸೆಯ ಅಗತ್ಯವಿತ್ತು ಎಂದು ಮುಖ್ಯ ವೈದ್ಯಾಧಿಕಾರಿ ತಿಳಿಸಿದ್ದಾರೆ. ಅವರನ್ನು ಮೊದಲು ಮಿರ್ಜಾಪುರದ ಆಸ್ಪತ್ರೆಗೆ ಹಾಗೂ ಬಳಿಕ ಬನಾರಸ್ ಹಿಂದೂ ವಿಶ್ವವಿದ್ಯಾಲಯದ (BHU) ಆಸ್ಪತ್ರೆಗೆ ರೆಫರ್ ಮಾಡಲಾಗಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ.

ಮಿರ್ಜಾಪುರಕ್ಕೆ ತೆರಳಿದ್ದ ಕುಟುಂಬ ಬಳಿಕ ಮರಳಿ ಬಂದಿತ್ತು. ಸೆ.29ರ ರಾತ್ರಿ ಮತ್ತೆ ಜಿಲ್ಲಾ ಆಸ್ಪತ್ರೆಗೆ ಬಂದಾಗಲೂ ವೈದ್ಯರು ಹಾಗೂ ಸಿಬ್ಬಂದಿ ಮಹಿಳೆಯನ್ನು ಪರಿಶೀಲಿಸಿ, ಹೆಚ್ಚಿನ ಚಿಕಿತ್ಸೆ ಅಗತ್ಯವಿರುವ ಹಿನ್ನೆಲೆಯಲ್ಲಿ BHUಗೆ ಕಳುಹಿಸಲು ಸೂಚಿಸಿದ್ದರು ಎಂದು ಆರೋಗ್ಯ ಇಲಾಖೆ ಹೇಳಿದೆ. ಆದರೆ ಕುಟುಂಬದವರು ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಿಕೊಳ್ಳಲಾಗದೆ ಆಸ್ಪತ್ರೆಯಿಂದ ಹೊರಟ ಸಂದರ್ಭದಲ್ಲಿ ರಸ್ತೆ ಬದಿಯಲ್ಲೇ ಹೆರಿಗೆ ನಡೆದಿದೆ ಎಂದು ಅಧಿಕಾರಿಗಳ ಹೇಳಿಕೆಯಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular