HomeIndiaBREAKING : ಮಹಾರಾಷ್ಟ್ರದ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; ಮೂರು ನವಜಾತ ಶಿಶುಗಳು ಸಜೀವ...

BREAKING : ಮಹಾರಾಷ್ಟ್ರದ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; ಮೂರು ನವಜಾತ ಶಿಶುಗಳು ಸಜೀವ ದಹನ |WATCH VIDEO

ಅಮರಾವತಿ: ಮಹಾರಾಷ್ಟ್ರದ ಅಮರಾವತಿಯ ಸರ್ಕಾರಿ ಆಸ್ಪತ್ರೆಯಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೂರು ನವಜಾತ ಶಿಶುಗಳು ಮೃತಪಟ್ಟಿವೆ. ವೆಂಟಿಲೇಟರ್ ಸ್ಫೋಟಗೊಂಡ ಬಳಿಕ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ.

ಮುಂಜಾನೆ ಸುಮಾರು 3.30ಕ್ಕೆ ಆಸ್ಪತ್ರೆಯ ಮೂರನೇ ಮಹಡಿಯಲ್ಲಿದ್ದ ವೆಂಟಿಲೇಟರ್ ಸ್ಫೋಟಗೊಂಡು ಬೆಂಕಿ ಕಾಣಿಸಿಕೊಂಡಿದೆ. ಘಟನೆ ನಡೆದ ವೇಳೆ ಅಮರಾವತಿ ಜಿಲ್ಲಾ ಮಹಿಳಾ ಆಸ್ಪತ್ರೆಯ ವಿಶೇಷ ನವಜಾತ ಶಿಶು ಆರೈಕೆ ಘಟಕದಲ್ಲಿ (SNCU) 39 ನವಜಾತ ಶಿಶುಗಳು ಚಿಕಿತ್ಸೆ ಪಡೆಯುತ್ತಿದ್ದರು.

ಬೆಂಕಿ ಕಾಣಿಸಿಕೊಂಡ ತಕ್ಷಣ ವೈದ್ಯರು, ನರ್ಸ್‌ಗಳು ಹಾಗೂ ಆಸ್ಪತ್ರೆಯ ಸಿಬ್ಬಂದಿ ವಾರ್ಡ್‌ಗೆ ಧಾವಿಸಿ ಶಿಶುಗಳನ್ನು ಸುರಕ್ಷಿತವಾಗಿ ಹೊರಗೆ ಸ್ಥಳಾಂತರಿಸಲು ಮುಂದಾದರು. ವೈದ್ಯಕೀಯ ಉಪಕರಣಗಳನ್ನು ಸಂಪರ್ಕದಿಂದ ಬೇರ್ಪಡಿಸಿ, ಶಿಶುಗಳನ್ನು ಬೆಂಕಿ ಆವರಿಸಿದ್ದ ಪ್ರದೇಶದಿಂದ ಹೊರಗೆ ಕರೆತರಲಾಯಿತು.ಈ ವೇಳೆ ತೀವ್ರ ಸುಟ್ಟ ಗಾಯಗಳು ಹಾಗೂ ಹೊಗೆ ಸೇವನೆಯಿಂದ ಮೂರು ಶಿಶುಗಳು ಮೃತಪಟ್ಟಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ವೆಂಟಿಲೇಟರ್‌ ಸ್ಫೋಟಗೊಂಡ ಬಳಿಕ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಗಳು ತಿಳಿಸಿವೆ. ಆ ವೇಳೆ ಅಲ್ಲಿ 39 ನವಜಾತ ಶಿಶುಗಳು ಚಿಕಿತ್ಸೆ ಪಡೆಯುತ್ತಿದ್ದರು. ಬೆಂಕಿ ಕಾಣಿಸಿಕೊಂಡ ತಕ್ಷಣ ವೈದ್ಯರು, ನರ್ಸ್‌ಗಳು ಹಾಗೂ ಆಸ್ಪತ್ರೆಯ ಸಿಬ್ಬಂದಿ ಶಿಶುಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಿದರು. ಆರು ಶಿಶುಗಳನ್ನು ಹೆಚ್ಚಿನ ಚಿಕಿತ್ಸೆಗೆ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಗ್ನಿ ಅವಘಡದಲ್ಲಿ ಮೂರು ನವಜಾತ ಶಿಶುಗಳು ಮೃತಪಟ್ಟಿವೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular