ಶ್ರೀನಗರ: ಜಮ್ಮು-ಕಾಶ್ಮೀರದಾದ್ಯಂತ ಭಾರಿ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಅಮರನಾಥ ಯಾತ್ರೆಯನ್ನು ಮತ್ತೆ ಸ್ಥಗಿತಗೊಳಿಸಲಾಗಿದೆ.
ಆಗಸ್ಟ್ 3ರವರೆಗೆ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಹಲ್ಗಾಮ್ ಹಾಗೂ ಬಾಲ್ ಟಾಲ್ ಮಾಅರ್ಗಗಳಲ್ಲಿ ತುರ್ತು ನಿರ್ವಹಣಾ ಮತ್ತು ದುರಸ್ತಿ ಕಾರ್ಯ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ಯತರೆಯನ್ನು ಸ್ಥಗಿತಗೊಳಿಸಲಾಗಿದೆ.
ಇಂದು ಬೆಳಿಗ್ಗೆ ಪಹಲ್ಗಾಮ್ ಮಾರ್ಗದಲ್ಲಿ ಅಮರನಾಥ ಯಾತ್ರೆಗೆ ಅನುಮತಿ ನೀಡಲಾಗಿಲ್ಲ. ಆದರೆ ಬಾಲ್ ಟಾಲ್ ಮಾರ್ಗದಿಂದ ಅನುಮತಿ ನೀಡಲಾಗಿತ್ತು. ಆದರೆ ಅಲ್ಲಿಯೂ ಧಾರಾಕಾರ ಮಳೆ ಆರಂಭವಾಗಿದ್ದರಿಂದ ಯಾತ್ರೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಭಕ್ತರ ಸುರಕ್ಷತೆ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕಾಶ್ಮೀರ ವಿಭಾಗೀಯ ಆಯುಕ್ತ ವಿಜಯ್ ಕುಮಾರ್ ಭಿದೂರಿ ಮಾಹಿತಿ ನೀಡಿದ್ದಾರೆ.