HomeBusinessGood News: ಬೆಂಗಳೂರಲ್ಲಿ 10ನೇ ಕಾರ್ಪೊರೇಟ್ ಕಚೇರಿ ಆರಂಭಿಸಿದ ಅಮೆಜಾನ್

Good News: ಬೆಂಗಳೂರಲ್ಲಿ 10ನೇ ಕಾರ್ಪೊರೇಟ್ ಕಚೇರಿ ಆರಂಭಿಸಿದ ಅಮೆಜಾನ್

ಬೆಂಗಳೂರು ನಗರದಲ್ಲಿ ಅಮೆಜಾನ್ ಕಂಪನಿಯ ಮತ್ತೊಂದು ಕಾರ್ಪೊರೇಟ್ ಕಚೇರಿ ಉದ್ಘಾಟನೆಯಾಗಿದೆ. ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಸೋಮವಾರ ಕಚೇರಿ ಲೋಕಾರ್ಪಣೆ ಮಾಡಿದರು. ಇದು ಕರ್ನಾಟಕದಲ್ಲಿರುವ ಅಮೆಜಾನ್ 10ನೇ ಕಾರ್ಪೊರೇಟ್ ಕಚೇರಿಯಾಗಿದೆ.

ಅಮೆಜಾನ್ ಕಂಪನಿಯು ಯಲಹಂಕ ಸಮೀಪದಲ್ಲಿ ನಿರ್ಮಿಸಿರುವ, 11 ಲಕ್ಷ ಚದರ ಅಡಿ ವಿಸ್ತಾರದ ಸುಸಜ್ಜಿತ ಕಾರ್ಪೊರೇಟ್ ಪ್ರಧಾನ ಕಚೇರಿಯನ್ನು (BLR37) ಸಚಿವ ಎಂ.ಬಿ.ಪಾಟೀಲ್ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಅಮೆಜಾನ್ ಕಂಪನಿಯ ಜಾಗತಿಕ ವ್ಯವಹಾರಗಳ ವಿಭಾಗದ ಮುಖ್ಯಸ್ಥ ಡೇವಿಡ್ ಝಪೊಲೋಸ್ಕಿ, ಉಪಾಧ್ಯಕ್ಷ ಚೇತನ್ ಕೃಷ್ಣಸ್ವಾಮಿ, ಮತ್ತೋರ್ವ ಉಪಾಧ್ಯಕ್ಷ ಸಮೀರ್ ಕುಮಾರ್, ಜಾಗತಿಕ ಆಸ್ತಿಪಾಸ್ತಿಗಳ ವಿಭಾಗದ ಉಪಾಧ್ಯಕ್ಷ ಸೀನ್ ಲೀ ಮುಂತಾದವರು ಉಪಸ್ಥಿತರಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರ್ನಾಟಕದಲ್ಲಿ ಇದು ಅಮೆಜಾನ್ ಕಂಪನಿಯ 10ನೇಯ ಕಾರ್ಪೊರೇಟ್ ಕಚೇರಿಯಾಗಿದೆ. ರಾಜ್ಯದೊಂದಿಗೆ ಎರಡು ದಶಕಗಳ ಬಾಂಧವ್ಯ ಹೊಂದಿರುವ ಕಂಪನಿಯು ಮುಂದಿನ 4 ವರ್ಷಗಳಲ್ಲಿ ಭಾರತದಲ್ಲಿ 35 ಬಿಲಿಯನ್ ಡಾಲರ್ ಬಂಡವಾಳ ಹೂಡಿಕೆ ಮಾಡಲಿದೆ. ಇದರಿಂದ 15 ಮಿಲಿಯನ್ ಸಣ್ಣ ಉದ್ಯಮಗಳಿಗೆ ನೆರವು ಸಿಗಲಿದ್ದು, ಲಕ್ಷಾಂತರ ಉದ್ಯೋಗಗಳು ಸೃಷ್ಟಿಯಾಗಲಿವೆ. ಇದರಲ್ಲಿ ರಾಜ್ಯಕ್ಕೆ ಗಮನಾರ್ಹ ಪಾಲು ಹರಿದು ಬರಲಿದೆ.

ರಾಜ್ಯವು 3.80 ಲಕ್ಷ ರೂ.ಗಳಿಗಿಂತ ಹೆಚ್ಚು ತಲಾ ಆದಾಯ ಹೊಂದಿದ್ದು, ದೇಶದಲ್ಲೇ ಅಗ್ರಸ್ಥಾನದಲ್ಲಿದೆ. ಜೊತೆಗೆ, ದೇಶದ ಬೊಕ್ಕಸಕ್ಕೆ ವಾರ್ಷಿಕ 1.6 ಲಕ್ಷ ಕೋಟಿ ರೂ. ಜಿ.ಎಸ್.ಟಿ ಪಾವತಿ ಮೂಲಕ ದ್ವಿತೀಯ ಸ್ಥಾನದಲ್ಲಿದ್ದೇವೆ. ನಾವೀನ್ಯತಾ ಸೂಚ್ಯಂಕದಲ್ಲಿ ಬೆಂಗಳೂರು ಜಾಗತಿಕ ಸ್ತರದಲ್ಲಿ 21ನೇ ಸ್ಥಾನಕ್ಕೆ ಜಿಗಿದಿದೆ. ಟೆಕ್-ಸಿಟಿ ಸೂಚ್ಯಂಕದಲ್ಲಿ ಮೊದಲ 30 ಸ್ಥಾನಗಳ ಒಳಗೆ ಕಾಣಿಸಿಕೊಂಡಿರುವ ದೇಶದ ಏಕೈಕ ನಗರ ಬೆಂಗಳೂರಾಗಿದೆ.

ಕಳೆದ ವರ್ಷ ಬೆಂಗಳೂರಿನಲ್ಲಿ 14.6 ಮಿಲಿಯನ್ ಚದರ ಅಡಿ ಜಾಗವನ್ನು ಕೈಗಾರಿಕಾ ವಹಿವಾಟು ಉದ್ದೇಶಕ್ಕೆ ಭೋಗ್ಯಕ್ಕೆ ನೀಡಿದ್ದು, ನಾವು ಪ್ರಥಮ ಸ್ಥಾನದಲ್ಲಿದ್ದೇವೆ.  ದೇಶದಲ್ಲಿ ಒಟ್ಟು 900 ಜಿಸಿಸಿ ಕೇಂದ್ರಗಳಿದ್ದು, ಇವುಗಳ ಪೈಕಿ ಶೇ.35ರಷ್ಟು ಕರ್ನಾಟಕದಲ್ಲೇ ಇವೆ.

ಇ-ಕಾಮರ್ಸ್ ವಹಿವಾಟಿಗೆ ಬೇಕಾದ ಮೂಲಸೌಕರ್ಯದಲ್ಲೂ ರಾಜ್ಯವು ಮೊದಲ ಸ್ಥಾನದಲ್ಲಿದೆ. ನಮ್ಮಲ್ಲಿ 42.48 ಲಕ್ಷ ಟನ್ ದಾಸ್ತಾನು ಸಂಗ್ರಹಿಸುವಷ್ಟು ಉಗ್ರಾಣಗಳು ಮತ್ತು 233 ಶೀತಲಗೃಹಗಳಿವೆ. ಇದಕ್ಕೆ ತಕ್ಕಂತೆ ಇ-ಕಾಮರ್ಸ್ ವಹಿವಾಟು ಶೇ.11ರಷ್ಟು ಬೆಳವಣಿಗೆ ಸಾಧಿಸುತ್ತಿದೆ.

ಅಮೆಜಾನ್ ಮತ್ತು ಜಾಗತಿಕ ಮಟ್ಟದ ಇತರ ಕಂಪನಿಗಳು ರಾಜ್ಯದಲ್ಲಿರುವ ಈ ಕೈಗಾರಿಕಾಸ್ನೇಹಿ ಕಾರ್ಯಪರಿಸರದ ಲಾಭವನ್ನು ಪಡೆದುಕೊಂಡು ಹೆಚ್ಚುಹೆಚ್ಚು ಹೂಡಿಕೆ ಮಾಡಬೇಕು. ಜತೆಗೆ ಇಲ್ಲೇ ಉತ್ಪಾದನೆ ಮಾಡಿ, ಜಗತ್ತಿನ ವಿವಿಧ ದೇಶಗಳಿಗೆ ರಫ್ತು ಮಾಡುವ ಮೂಲಕ ಕರ್ನಾಟಕವನ್ನು ಜಾಗತಿಕ ಉತ್ಪಾದನಾ ಕೇಂದ್ರವನ್ನಾಗಿಸಬೇಕು ಎಂದು ಸಚಿವರು ಹೇಳಿದ್ದಾರೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular