HomeBusinessಇದೇ ಮೊದಲ ಬಾರಿಗೆ ಲಿಡ್ಕರ್ ಗೆ ರಾಯಭಾರಿ ನೇಮಕ: ನಟ ಡಾಲಿ ಧನಂಜಯ್ ಆಯ್ಕೆ

ಇದೇ ಮೊದಲ ಬಾರಿಗೆ ಲಿಡ್ಕರ್ ಗೆ ರಾಯಭಾರಿ ನೇಮಕ: ನಟ ಡಾಲಿ ಧನಂಜಯ್ ಆಯ್ಕೆ

ಬೆಂಗಳೂರು: ಡಾ. ಬಾಬು ಜಗಜೀವನ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ(ಲೀಡ್ಕರ್) ಗೆ ಇದೇ ಮೊದಲ ಬಾರಿಗೆ ರಾಯಭಾರಿಯನ್ನು ಆಯ್ಕೆ ಮಾಡಲಾಗಿದೆ.

ಖ್ಯಾತ ನಟ ಹಾಗೂ ನಿರ್ಮಾಪಕ ಡಾಲಿ ಧನಂಜಯ್ ಅವರನ್ನು ಲಿಡ್ಕರ್ ರಾಯಭಾರಿಯಾಗಿ ಆಯ್ಕೆ ಮಾಡಲಾಗಿದ್ದು, ಶೀಘ್ರದಲ್ಲೇ ಅವರು ಸರ್ಕಾರದ ಜಾಹೀರಾತಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಟ ಧನಂಜಯ್ ಅವರು ಲಿಡ್ಕರ್ ರಾಯಭಾರಿಯಾಗಿರುವುದು ಸಂತಸದ ವಿಷಯವಾಗಿದೆ. ಎಲ್ಲಾ ವರ್ಗದ ಜನರನ್ನು ತಲುಪಿರುವ ಕಲಾವಿದ ಅವರಾಗಿದ್ದು, ಅವರನ್ನು ಆಯ್ಕೆ ಮಾಡಿದ್ದೇವೆ. ಸಚಿವರು ಕೂಡ ಇದಕ್ಕೆ ಒಪ್ಪಿಗೆ ಸೂಚಿಸಿದ್ದು, ಶೀಘ್ರವೇ ಜಾಹೀರಾತಿನ ಚಿತ್ರೀಕರಣ ನಡೆಯಲಿದೆ ಎಂದು ಲಿಡ್ಕರ್ ವ್ಯವಸ್ಥಾಪಕ ನಿರ್ದೇಶಕಿ ಕೆ.ಎಂ.ಎಸ್. ವಸುಂಧರಾ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular