YSR ಕಾಂಗ್ರೆಸ್ ಗೆ ಸೇರ್ಪಡೆಯಾದ ಒಂದೇ ವಾರದಲ್ಲಿ ಪಕ್ಷವನ್ನೇ ತೊರೆದ ಕ್ರಿಕೆಟಿಗ ಅಂಬಾಟಿ ರಾಯುಡು

ಹೈದರಾಬಾದ್: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಅಂಬಾಟಿ ರಾಯುಡು ವಾರದ ಹಿಂದಷ್ಟೇ ಆಂಧ್ರಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ಸಮ್ಮುಖದಲ್ಲಿ ವೈಎಸ್ ಆರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಆದರೆ ಇದೀಗ ಒಂದೇ ವಾರದಲ್ಲಿ ಪಕ್ಷವನ್ನು ತೊರೆದಿರುವುದು ಅಚ್ಚರಿಗೆ ಕಾರಣವಾಗಿದೆ.

ನಾನು ವೈಎಸ್ ಆರ್ ಕಾಂಗ್ರೆಸ್ ಪಕ್ಷ ತ್ಯಜಿಸಲು ನಿರ್ಧರಿಸಿದ್ದೇನೆ. ಮಾತ್ರವಲ್ಲ ಸ್ವಲ್ಪ ಸಮಯ ರಾಜಕೀಯದಿಂದಲೇ ದೂರವಿರಲು ತೀರ್ಮಾನಿಸಿರುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ತಿಳಿಸಿದ್ದಾರೆ.

ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಜೊತೆ ಆತ್ಮೀಯತೆ ಹೊಂದಿದ್ದ ಅಂಬಾಟಿ ರಾಯುಡು, ಕೆಲ ದಿನಗಳ ಹಿಂದೆ ಅಧಿಕೃತವಾಗಿ ವೈಎಸ್ ಆರ್ ಕಾಂಗ್ರೆಸ್ ಪಕ್ಷ ಸೇರಿದ್ದರು. ಅಲ್ಲದೇ ಲೋಕಸಭಾ ಚುನಾವಣೆಯಲ್ಲಿ ಗುಂಟೂರು ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಮಾತು ಕೂಡ ಕೇಳಿಬಂದಿತ್ತು. ಆದರೆ ಈಗ ಏಕಾಏಕಿ ಪಕ್ಷ ತೊರೆದಿದ್ದು, ಮುಂದಿನ ನಡೆ ಬಗ್ಗೆ ಸೂಕ್ತ ಸಮಯದಲ್ಲಿ ತಿಳಿಸುವುದಾಗಿ ಹೇಳುವ ಮೂಲಕ ಕುತೂಹಲ ಮೂಡಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read