BREAKING : ರಾಜ್ಯದ ಎಲ್ಲ ಸರ್ಕಾರಿ ಸಮಾರಂಭಗಳಲ್ಲಿ ಇನ್ಮುಂದೆ ‘ಅಂಬೇಡ್ಕರ್ ಭಾವಚಿತ್ರ’ ಕಡ್ಡಾಯ ; ರಾಜ್ಯ ಸರ್ಕಾರ ಅಧಿಕೃತ ಆದೇಶ.!

ಬೆಂಗಳೂರು : ರಾಜ್ಯದ ಎಲ್ಲ ಸರ್ಕಾರಿ ಸಮಾರಂಭಗಳಲ್ಲಿ ಇನ್ಮುಂದೆ ಅಂಬೇಡ್ಕರ್ ಭಾವಚಿತ್ರ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ . ಸಂಸ್ಥೆಗಳು ಹಾಗೂ ಶಾಲಾ ಕಾಲೇಜು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಸಮಾರಂಭಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಭಾವಚಿತ್ರದೊಂದಿಗೆ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ||ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರವನ್ನು ಸಹ ಕಡ್ಡಾಯವಾಗಿ ಇಡುವಂತೆ ಸೂಚಿಸಿದೆ.

ಮುಂದುವರೆದು, ನವೆಂಬರ್ 26ರ ಸಂವಿಧಾನದ ದಿನಾಚರಣೆ ಸಂದರ್ಭದಲ್ಲಿ ಮೇಲ್ಕಂಡ ಎಲ್ಲಾ ಸಂಸ್ಥೆಗಳು, ಶಾಲಾ ಕಾಲೇಜು ಹಾಗೂ ಸರ್ಕಾರಿ ಕಛೇರಿಗಳಲ್ಲಿ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ||ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ಸೂಚಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read